Breaking News

ಬಿಜೆಪಿಗೆ ಸೇರ್ಪಡೆಯಾದ 17 ಜನ ಶಾಸಕರಿಗೆ ಶಾಕ್ ಕೊಟ್ಟ ಮಾಜಿ ಸಿಎಂ

ಮೈಸೂರು : ಬಿಜೆಪಿ ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ 17 ಜನ ಶಾಸಕರ ಕುರಿತಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನೀಡಿರುವ ಹೇಳಿಕೆ ಇದೀಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಸಂಪುಟ ವಿಸ್ತರಣೆ ಕುರಿತಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಯಡಿಯೂರಪ್ಪ, ಕೇಂದ್ರದ ನಾಯಕರು ಇನ್ನೆರಡು ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಿದ್ದಾರೆ.ವಿಜಯೇಂದ್ರ ಸಂಪುಟ ಸೇರ್ಪಡೆ ಕುರಿತು ನನಗೆ ಗೊತ್ತಿಲ್ಲ ಎಂದು ಹೇಳಿದರು.

ಇದೇ ವೇಳೆ, ಕಾಂಗ್ರೆಸ್, ಜೆಡಿಎಸ್ 17 ಶಾಸಕರು ಬಿಜೆಪಿಯಲ್ಲೇ ಉಳಿಯುತ್ತಾರಾ ಎಂಬ ಮಾಧ್ಯಮದವರ ಪ್ರಶ್ನೆಗೆ, ಈ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳುವ ಮೂಲಕ ಬಿಗ್ ಶಾಕ್ ನೀಡಿದ್ದಾರೆ.

ಈಗಾಗಲೇ ಸಚಿವ ಸಂಪುಟದ ಕುರಿತು ಸ್ಪಷ್ಟ ಸೂಚನೆ ನೀಡಲು ಹೈಕಮಾಂಡ್ ಹಿಂದೇಟು ಹಾಕುತ್ತಿದೆ. ಮತ್ತೊಂದೆಡೆ ಪಕ್ಷೇತರ ಶಾಸಕ ನಾಗೇಶ್ ಕಾಂಗ್ರೆಸ್ ಕದ ತಟ್ಟಿದ್ದಾರೆ. ಸಚಿವ ಎಂಬಿಟಿ ನಾಗರಾಜ್ ಕೂಡ ಬಿಜೆಪಿಗೆ ಬಂದು ತಪ್ಪು ಮಾಡಿದೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಇದೆಲ್ಲದರ ನಡುವೆ ಯಡಿಯೂರಪ್ಪ ಹೇಳಿಕೆ ಭಾರಿ ಮಹತ್ವ ಪಡೆದುಕೊಂಡಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *