Breaking News

ನರ್ಸಿಂಗ್ ಕಾಲೇಜುಗಳ ಗುಣಮಟ್ಟ ಸುಧಾರಣೆಗೆ ಆದ್ಯತೆ ನೀಡಲಾಗುತ್ತಿದೆ : ಬೊಮ್ಮಾಯಿ


ಬೆಂಗಳೂರು: ರಾಜ್ಯದಲ್ಲಿರುವ ನರ್ಸಿಂಗ್ ಕಾಲೇಜುಗಳ ಗುಣಮಟ್ಟ ಸುಧಾರಣೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಆಂಗ್ಲೋ ಇಂಡಿಯನ್ ಯುನಿಟಿ ಸೆಂಟರ್ ಇವರ ಸಹಭಾಗಿತ್ವದಲ್ಲಿ ಅಂತರರಾಷ್ಟ್ರೀಯ ಶುಶ್ರೂಷಕರ ದಿನಾಚರಣೆ ಮತ್ತು 20ನೇ ಕರ್ನಾಟಕ ರಾಜ್ಯ ಮಟ್ಟದ ಫ್ಲಾರೆನ್ಸ್ ನೈಟಿಂಗೇಲ್ ಶುಶ್ರೂಷ ಅಧಿಕಾರಿಗಳ ಪ್ರಶಸ್ತಿ 2020-2021 ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ಆರೋಗ್ಯ ಕ್ಷೇತ್ರದಲ್ಲಿ ನರ್ಸಿಂಗ್ ವೃತ್ತಿಗೆ ಬಹಳ ಮಹತ್ವವಿದೆ. ಆಧುನಿಕ ವೈದ್ಯಕೀಯ ಉಪಕರಣಗಳ ಬಳಕೆ ಸೇರಿದಂತೆ ವೈದ್ಯಕೀಯ ಕ್ಷೇತ್ರದ ಎಲ್ಲ ಅರಿವು ಶುಶ್ರೂಷಕರಿಗೆ ಅವಶ್ಯಕವಿದೆ. ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು ಪರಸ್ಪರ ಸಹಕಾರದಿಂದ ಕಾರ್ಯನಿರ್ವಹಿಸಬೇಕು. ಉತ್ತಮ ಸೇವೆ ಸಲ್ಲಿಸಿದ ಶುಶ್ರೂಷಕರನ್ನು ಗುರುತಿಸಿ ಗೌರವಿಸುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ತಿಳಿಸಿದರು.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *