Breaking News

ಹುಬ್ಬಳ್ಳಿಯಲ್ಲಿ ನಿರ್ಮಾಣಗೊಂಡಿದೆ ಏಷ್ಯಾದ ಅತಿದೊಡ್ಡ ಮ್ಯೂಸಿಯಂ: ಜ್ಞಾನಲೋಕದ ಭವ್ಯ ವೇದಿಕೆ

ಹುಬ್ಬಳ್ಳಿ: ಇಷ್ಟು ದಿನ ವಾಣಿಜ್ಯನಗರಿಯಾಗಿ ಬಿಂಬಿತವಾಗಿದ್ದ ಹುಬ್ಬಳ್ಳಿ ಈಗ ಧಾರ್ಮಿಕ ಹಾಗೂ ಆಧ್ಯಾತ್ಮಿಕ ನಗರವಾಗಿ ಹೊರಹೊಮ್ಮಲಿದೆ. ಇಲ್ಲಿನ ಭೈರಿದೇವರಕೊಪ್ಪದಲ್ಲಿ ನಿರ್ಮಾಣಗೊಂಡಿರುವ ಮ್ಯೂಸಿಯಂ ಏಷ್ಯಾದಲ್ಲಿಯೇ ಅತಿದೊಡ್ಡ ಮ್ಯೂಸಿಯಂ ಆಗಿದೆ‌.

ಮುಗಿಲೆತ್ತರಕ್ಕೆ ತಲೆಯೆತ್ತಿರುವ ಕಟ್ಟಡಗಳು. ಒಳಗೆ ಹೋದಂತೆ ಭವ್ಯವಾದ ನಿಸರ್ಗ ಸೌಂದರ್ಯ ಉಣಬಡಿಸುವ ಪರಿಸರ. ಇನ್ನೂ ಒಳಗೆ ಎಂಟ್ರಿ ಕೊಟ್ಟರೇ ಆಧ್ಯಾತ್ಮಿಕ ಜೀವನಕ್ಕೆ ಅಗತ್ಯವಾದ ಚಿತ್ರಣಗಳು. ಹೌದು.. ಇದೆಲ್ಲದಕ್ಕೂ ಸಾಕ್ಷಿಯಾಗಿರುವುದು ಪ್ರಜಾಪೀತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ ನಿರ್ಮಾಣ ಮಾಡಿರುವ ಜ್ಞಾನ ಲೋಕ ಮ್ಯೂಸಿಯಂ. ಹುಬ್ಬಳ್ಳಿಯ ಭೈರಿದೇವರಕೊಪ್ಪದ ಗಾಮನಗಟ್ಟಿ ರಸ್ತೆಯಲ್ಲಿ ಸುಮಾರು ಐದು ಎಕರೆಯಲ್ಲಿ ಈ ಒಂದು ಮ್ಯೂಸಿಯಂ ನಿರ್ಮಾಣ ಮಾಡಿದ್ದು, ಭಗವದ್ಗೀತೆಯ ಕುರಿತು ಹಾಗೂ ಜನರಿಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಪರಿಚಯಿಸುವ ಸದುದ್ದೇಶದಿಂದ ಇಂತಹದೊಂದು ಮ್ಯೂಸಿಯಂ ನಿರ್ಮಾಣ ಮಾಡಿದ್ದಾರೆ. ಇದು ದೇಶದಲ್ಲಿ ಮಾತ್ರವಲ್ಲದೆ ಏಷ್ಯಾದಲ್ಲಿಯೇ ಅತಿದೊಡ್ಡ ಮ್ಯೂಸಿಯಂ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಇನ್ನೂ ಸುಮಾರು 108 ಸ್ಟಾಲ್ ಮೂಲಕ ಭಗವದ್ಗೀತೆಯ ಸಾರವನ್ನು ಸಾರ್ವಜನಿಕರಿಗೆ ಅರ್ಥೈಸುವ ನಿಟ್ಟಿನಲ್ಲಿ ಇಂತಹದೊಂದು ಮ್ಯೂಸಿಯಂ ನಿರ್ಮಾಣ ಮಾಡಿದ್ದು, ಇದೇ 15ರಂದು ರವಿವಾರ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಉದ್ಘಾಟನೆ ಮಾಡುವ ಮೂಲಕ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತ ಮಾಡಲಾಗುತ್ತದೆ.

ಒಟ್ಟಿನಲ್ಲಿ ವಾಣಿಜ್ಯನಗರಿಯಾಗಿದ್ದ ಹುಬ್ಬಳ್ಳಿ ಈಗ ಇಂತಹ ಬೆಳವಣಿಗೆಯಿಂದ ಐತಿಹಾಸಿಕ ನಗರಿ ಹಾಗೂ ಆಧ್ಯಾತ್ಮಿಕ ನಗರಿ ಎಂಬುವಂತ ಹೆಗ್ಗಳಿಕೆಗೆ ಪಾತ್ರವಾಗಿರುವುದು ನಿಜಕ್ಕೂ ವಿಶೇಷವಾಗಿದೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *