ಬೆಂಗಳೂರು : ಯುವತಿ ಮೇಲೆ ಆಯಸಿಡ್ ಎರಚಿದ್ದ ಆರೋಪಿ ನಾಗೇಶ್ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿರುವ ಘಟನೆ ಕೆಂಗೇರಿ ಬ್ರಿಡ್ಜ್ ಬಳಿ ನಡೆದಿದೆ.
ಬೆಂಗಳೂರಿನಲ್ಲಿ ಯುವತಿ ಮೇಲೆ ಆಯಸಿಡ್ ಎರಚಿ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ನಾಗೇಶ್ ನನ್ನು ನಿನ್ನೆ ಪೊಲಿಈಸರು ಬಂಧಿಸಿ ಬೆಂಗಳೂರಿಗೆ ಕರೆತರುತ್ತಿದ್ದರು.ಮಾರ್ಗ ಮಧ್ಯೆ ಮೂತ್ರ ವಿಸರ್ಜನೆಗೆ ಹೋಗಬೇಕು ಎಂದು ನಾಗೇಶ್ ಪೊಲೀಸರಿಗೆ ಕೇಳಿದ್ದಾನೆ. ಈ ವೇಳೆ ಪೊಲೀಸರು ನೈಸ್ ರಸ್ತೆ ಬಳಿ ನಿಲ್ಲಿಸದೇ ಕೆಂಗೇರಿಯ ಬಳಿ ವಾಹನ ನಿಲ್ಲಿಸಿದ್ದರು.
ಪೊಲೀಸರು ವಾಹನ ನಿಲ್ಲಿಸಿದ್ದ ವೇಳೆ ನಾಗೇಶ್ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ತಡೆಯಲು ಹೋದಾಗ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಹೀಗಾಗಿ ಕಾಮಾಕ್ಷಿ ಪಾಳ್ಯದ ಇನ್ಸ್ ಪೆಕ್ಟರ್ ಪ್ರಶಾಂತ್ ಗಾಳಿಯಲ್ಲಿ ಗುಂಡು ಹಾರಿಸಿ ತಪ್ಪಿಸಿಕೊಳ್ಳದಂತೆ ಎಚ್ಚರಿಕೆ ನೀಡಿದರೂ ನಾಗೇಶ್ ತಪ್ಪಿಸಿಕೊಳ್ಳಲು ಯತ್ನಿಸಿದ ಹಿನ್ನೆಲೆಯಲ್ಲಿ ನಾಗೇಶ್ ಬಲಗಾಲಿಗೆ ಇನ್ಸ್ ಪೆಕ್ಟರ್ ಪ್ರಶಾಂತ್ ಗುಂಡು ಹಾರಿಸಿದ್ದಾರೆ. ಸದ್ಯ ನಾಗೇಶ್ ನನ್ನು ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

