ಉಡುಪಿ: ಕೇರಳ- ತಮಿಳುನಾಡು ಗಡಿಯಲ್ಲಿ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ 80ಕ್ಕೂ ಅಧಿಕ ಮಕ್ಕಳಲ್ಲಿ ಟೊಮ್ಯಾಟೋ ಜ್ವರ ಕಂಡು ಬಂದಿದ್ದು, ಉಡುಪಿಯಲ್ಲಿ ಈ ರೋಗ ಲಕ್ಷಣ ಪತ್ತೆಯಾಗಿಲ್ಲ. ಆದರೂ ಗಡಿ ಜಿಲ್ಲೆಗಳಲ್ಲಿ ಈ ಕುರಿತು ನಿಗಾ ಅಗತ್ಯ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ತಿಳಿಸಿದ್ದಾರೆ.
ಜ್ವರ ಕಾಣಿಸಿಕೊಳ್ಳುವ ಮಕ್ಕಳ ದೇಹದಲ್ಲಿ ಟೊಮ್ಯಾಟೋ ಆಕಾರದ ಗುಳ್ಳೆಗಳು ಏಳುವುದರಿಂದ ಇದಕ್ಕೆ ಟೊಮ್ಯಾಟೋ ಜ್ವರ ಎಂದು ಹೆಸರಿಡಲಾಗಿದೆ. ಈ ಜ್ವರವು ವೈರಸ್‌ನಿಂದ ಹರಡುತ್ತಿದ್ದು ಕೊರೊನಾ ಮತ್ತು ಈ ಜ್ವರಕ್ಕೆ ಸಂಬಂಧವಿಲ್ಲ. ಇದು ಚಿಕನ್‌ಗುನ್ಯಾದ ಲಕ್ಷಣವನ್ನು ಹೋಲುತ್ತಿದ್ದು ಜ್ವರ ಹಾಗೂ ಗುಳ್ಳೆಯ ಜತೆಗೆ ಕೆಮ್ಮು, ಶೀತ, ನಿರ್ಜಲೀಕರಣ ಉಂಟಾಗುತ್ತದೆ. ಇದು ಒಬ್ಬರಿಂದ ಇನ್ನೊಬ್ಬರಿಗೆ ಹರಡು ವುದರಿಂದ ಸೋಂಕಿತ ಮಕ್ಕಳು ಕ್ವಾರಂಟೈನ್ ಆಗಬೇಕು ಮತ್ತು ಗುಳ್ಳೆಗಳನ್ನು ಉಜ್ಜಬಾರದು. ಈ ಬಗ್ಗೆ ಎಲ್ಲರೂ ಆದಷ್ಟು ಜಾಗೃತಿ ವಹಿಸಬೇಕು ಎಂದು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

