ಧಾರವಾಡ: ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಲಾಗಿದೆ, ಜೊತೆಗೆ ಬೆಟ್ಟದ ಮೇಲೆ ಗಾಳಿ ಗೋಪುರ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹುಬ್ಬಳ್ಳಿಯ ಗೋಕುಲದಲ್ಲಿ ಜೀರ್ಣೋದ್ಧಾರವಾಗಿರುವ ದಾರಾವತಿ ಹನುಮಂತ ದೇವರ ದೇವಸ್ಥಾನಕ್ಕೆ ಭೇಟಿ ನೀಡಿ ಹನುಮಂತ ದೇವರ ಆಶೀರ್ವಾದ ಪಡೆದ ನಂತರ ಏರ್ಪಡಿಸಲಾಗಿದ್ದ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಹನುಮಂತ ಹುಟ್ಟಿದ್ದು ಕರ್ನಾಟಕದಲ್ಲಿ. ಆತ ಕನ್ನಡ ನಾಡಿನ ವರ ಪುತ್ರ. ಹೊಸಪೇಟೆಯ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿಗೆ ಈ ಸಾಲಿನ ಬಜೆಟ್‌ನಲ್ಲಿ 100 ಕೋಟಿ ರೂ.ಗಳ ಅನುದಾನವನ್ನು ಮೀಸಲಿಡಲಾಗಿದೆ. ಬೆಟ್ಟಕ್ಕೆ ರೋಪ್ ವೇ ಇಂದ ಹಿಡಿದು, ಕ್ಷೇತ್ರಕ್ಕೆ ಭೇಟಿ ನೀಡುವ ಜನರ ಅನುಕೂಲಕ್ಕಾಗಿ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಈ ಕೆಲಸ ಮಾಡುವ ಸೌಭಾಗ್ಯ ನನಗೆ ಸಿಕ್ಕಿದೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

