Breaking News

ಸಾವಿನಲ್ಲಿ ಒಂದಾದ ಅಮರ ಪ್ರೇಮಿಗಳು


ತುಮಕೂರು: ಸಾವಿನಲ್ಲಿ ಒಂದಾದ ತುಮಕೂರು ಮೂಲದ ಪ್ರೇಮಿಗಳಿಬ್ಬರನ್ನು ಒಂದೇ ಸ್ಥಳದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ. ಪ್ರಿಯಕರ ಅಪಘಾತದಲ್ಲಿ ಮೃತಪಟ್ಟ ನೋವಿನಿಂದ ಹೊರಬರಲಾಗದೇ ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದಳು. ಇದೀಗ ಆಕೆಯ ಅಂತ್ಯಕ್ರಿಯೆಯನ್ನು ಪ್ರಿಯಕರನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.

ತುಮಕೂರು ತಾಲೂಕಿನ ಮಸ್ಕಲ್ ಗ್ರಾಮದ ಧನುಷ್ (23) ಹಾಗೂ ಅದೇ ತಾಲ್ಲೂಕಿನ ಅರೆಹಳ್ಳಿ ಗ್ರಾಮದ ಸುಷ್ಮಾ(22) ಮೃತ ಪ್ರೇಮಿಗಳು. ಧನುಷ್​ ಅವರ ಜಮೀನಿನಲ್ಲೇ ಸುಷ್ಮಾಳ ಅಂತ್ಯಸಂಸ್ಕಾರವಾಗಿದೆ. ಯುವತಿ ಸ್ವಗ್ರಾಮ ಅರೆಹಳ್ಳಿಯಲ್ಲಿ ಸಮಾಧಿ ಮಾಡದೇ ಯುವಕನ ಊರಿನಲ್ಲಿ ಅಂತ್ಯಕ್ರಿಯೆ ಮಾಡುವ ಮೂಲಕ ಪ್ರೇಮಿಗಳ ಪ್ರೀತಿಯನ್ನು ಜೀವಂತವಾಗಿರಿಸಿದ್ದಾರೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *