Breaking News

ಸಂಸದೆ ಸುಮಲತಾ, ರಮ್ಯಾ ಬಿಜೆಪಿಗೆ ಬಂದರೇ ಸ್ವಾಗತ : ನಾರಾಯಣ ಗೌಡ


ಮಂಡ್ಯ: “ಮಂಡ್ಯದ ಹಾಲಿ ಸಂಸದೆ ಸುಮಲತಾ ಅಂಬರೀಷ್ ಮತ್ತು ಮಾಜಿ ಸಂಸದೆ ರಮ್ಯಾ ಬಿಜೆಪಿಗೆ ಬಂದರೇ ಭಾರತೀಯ ಜನತಾ ಪಕ್ಷ ಸ್ವಾಗತಿಸಲು ಸಿದ್ಧವಿದೆ” ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಮತ್ತು ಕ್ರೀಡಾ ಸಚಿವ ಕೆ. ಸಿ. ನಾರಾಯಣ ಗೌಡ ಹೇಳಿದರು.

ರಮ್ಯಾ ಮತ್ತು ಸುಮಲತಾ ಬಿಜೆಪಿ ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, “ಅವರಿಬ್ಬರು ಪಕ್ಷಕ್ಕೆ ಬಂದರೆ ಸೇರಿಸಿಕೊಳ್ಳುವುದಕ್ಕೆ ನಾವು ಸಿದ್ಧರಿದ್ದೇವೆ. ಆದರೆ ಈ ವಿಚಾರದಲ್ಲಿ ಪಕ್ಷದ ಹಿರಿಯರ ನಿರ್ಧಾರ ಅಂತಿಮ. ಅವರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎನ್ನುವುದನ್ನು ಬಿಡಿಸಿ ಹೇಳುವುದಕ್ಕಾಗಲ್ಲ. ಪಕ್ಷದಲ್ಲಾಗುತ್ತಿರುವ ಬೆಳವಣಿಗೆಯನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಆದರೆ ಬಿಜೆಪಿ ರಾಜ್ಯ ಮತ್ತು ಮಂಡ್ಯದಲ್ಲಿ ಭದ್ರವಾಗಿದೆ” ಎಂದರು.

Share News

About BigTv News

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *