Breaking News

ಮೇ .28 ರಂದು ಮೇಯರ್ , ಉಪಮೇಯರ್ ಚುನಾವಣೆ


ಹುಬ್ಬಳ್ಳಿ : ಮಹಾನಗರ ಪಾಲಿಕೆಯ 21 ನೇ ಅವಧಿಯ ಮಹಾಪೌರ ಹಾಗೂ ಉಪಮಹಾಪೌರ ಸ್ಥಾನಗಳಿಗೆ ಮೇ .28 ರಂದು ಚುನಾವಣೆ ನಡೆಸಲಾಗುವುದು ಎಂದು ಚುನಾವಣಾಧಿಕಾರಿಗಳೂ ಆಗಿರುವ ಬೆಳಗಾವಿ ವಿಭಾಗ ಪ್ರಾದೇಶಿಕ ಆಯುಕ್ತ ಆಮ್ಲನ್ ಆದಿತ್ಯ ಬಿಸ್ವಾಸ್ ತಿಳಿಸಿದ್ದಾರೆ .

ಈ ಕುರಿತು ಪ್ರಕಟಣೆ ನೀಡಿರುವ ಅವರು , ಮಹಾಪೌರ ಸ್ಥಾನವು ಸಾಮಾನ್ಯ ವರ್ಗ , ಉಪಮಹಾಪೌರ ಸ್ಥಾನವು ಸಾಮಾನ್ಯ ಮಹಿಳಾ ವರ್ಗಕ್ಕೆ ಮೀಸಲಿಡಲಾಗಿದೆ . ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಮೇ .28 ರಂದು ಚುನಾವಣೆ ನಡೆಯಲಿದೆ . ಅಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಾಮಪತ್ರಗಳನ್ನು ಸ್ವೀಕರಿಸಲಾಗುವುದು . ಮಧ್ಯಾಹ್ನ 3 ಗಂಟೆಗೆ ಸಭೆ ಪ್ರಾರಂಭವಾಗುವುದು . ನಾಮಪತ್ರಗಳ ಪರಿಶೀಲನೆ ನಂತರ ಉಮೇದುವಾರರ ಘೋಷಣೆ ನಾಮಪತ್ರ ಹಿಂಪಡೆಯಲು ಅವಕಾಶ ಕಲ್ಪಿಸಲಾಗುವುದು . ಅಗತ್ಯವಿದ್ದರೆ ಕೈ ಎತ್ತುವ ಮೂಲಕ ಮತದಾನ ನಡೆಸಿ ಮಹಾಪೌರ ಹಾಗೂ ಉಪಮಹಾಪೌರರನ್ನು ಚುನಾಯಿಸಲಾಗುವುದು ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ .

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *