Breaking News

ವರುಣನ ಆರ್ಭಟ : 16 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌


ಬೆಂಗಳೂರು: ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮೇ 18 ಮತ್ತು 19ರಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವುದರಿಂದ 16 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್‌’ ಮುಂದುವರಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ 18ರಂದು ಆರೆಂಜ್ ಅಲರ್ಟ್‌ ಹಾಗೂ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಿಸಲಾಗಿದೆ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *