Breaking News

ವೀರಶೈವ ಎಂಬುವುದು ಲಿಂಗಾಯತ ಧರ್ಮದ ಒಂದು ಪಂಗಡವಾಗಿದೆ : ಎಮ್.ವಿ.ಗೋಗರಶೆಟ್ಡಿ

ಹುಬ್ಬಳ್ಳಿ: ವೀರಶೈವ ಎಂಬುವುದು ಲಿಂಗಾಯತ ಧರ್ಮದ ಒಂದು ಪಂಗಡವಾಗಿದೆ. ಹಾಗಾಗಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾವನ್ನು ಅಖಿಲ ಭಾರತ ಲಿಂಗಾಯತ ಮಹಾಸಭಾವನ್ನಾಗಿ ಮಾಡಬೇಕೆಂದು ಮಹಾಸಭಾದ ಅಧ್ಯಕ್ಷ ಎಮ್.ವಿ.ಗೋಗರಶೆಟ್ಡಿ ಒತ್ತಾಯಿಸಿದರು.

ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಖಿಲ ಭಾರತ ಲಿಂಗಾಯತ ಮಹಾಸಭಾ ಹಿಂದಿನಿಂದಲೂ ಬಂದಂತಹ ಧರ್ಮವಾಗಿದೆ. ಆದರೆ ಇತ್ತಿಚೆಗೆ ಕೆಲವು ಮುಖಂಡರು ಅಖಿಲ ಭಾರತ ಲಿಂಗಾಯತ ಮಹಾಸಭಾವನ್ನು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭವನ್ನಾಗಿ ಮಾಡಿ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಈಗಾಗಲೇ ಇದನ್ನು ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ್ದೇವೆ. ಕೋರ್ಟ್ ನಲ್ಲಿ ನಮ್ಮ ಪರವಾಗಿ ತೀರ್ಪು ಬರುವ ನಿರೀಕ್ಷೆ ಇದೆ ಎಂದರು.

ವೀರಶೈವ ಎಂಬುದು ಲಿಂಗಾಯತ ಧರ್ಮದ ಪಂಗಡ ಎಂಬುದಕ್ಕೆ ಸಾಕಷ್ಟು ಸಾಕ್ಷಿ ಆಧಾರಗಳಿವೆ. ಗ್ರಂಥಗಳಿವೆ. ಕೇಂದ್ರ ಸರ್ಕಾರದ ನಿರ್ದೇಶನಗಳಿವೆ. ಹಾಗಾಗಿ ವೀರಶೈವ ಲಿಂಗಾಯತ ಧರ್ಮ ಎಂಬುದು ಸಮಂಜಸ ಅಲ್ಲ. ಸರ್ಕಾರವು ಜನರಿಗೆ ಕಳೆದ ಹತ್ತು ವರ್ಷಗಳಿಂದ ವೀರಶೈವ ಲಿಂಗಾಯತ ಜಾತಿ ಪ್ರಮಾಣ ಪತ್ರಗಳನ್ನು ನೀಡುತ್ತಿವೆ. ಈ ದಿಸೆಯಲ್ಲಿ ಲಿಂಗಾಯತ ಧರ್ಮದ ಪಂಗಡವಾದ ವೀರಶೈವವನ್ನು ಪ್ರತ್ಯೇಕ ಧರ್ಮ ಮಾಡುವುದು ಸರಿಯಲ್ಲ. ಈ ದಿಸೆಯಲ್ಲಿ ತಿಳುವಳಿಕೆ ನೀಡಲು ನಾವು ಸಿದ್ದ ಬೇಕಾದರೆ ಬಹಿರಂಗ ಚರ್ಚೆಗೆ ಆಹ್ವಾನಿಸಲಾಗುವುದು ಎಂದು ಗೋಗರಶೆಟ್ಟಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬಿ.ಬಿ‌.ಶಿರೂರ, ಎಸ್.ವಿ.ಕೊಟಗಿ, ಎಸ್.ವಿ‌.ಜೋಡಳ್ಳಿ ಸೇರಿದಂತೆ ಮುಂತಾದವರು ಇದ್ದರು.

Share News

About BigTv News

Check Also

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಬಾಂಬ್ ಬೆದರಿಕೆ: ಪರಿಶೀಲನೆ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಸೋಮವಾರ ಪೊಲೀಸರು ಪರಿಶೀಲನೆ ನಡೆಸಿದರು. …

Leave a Reply

Your email address will not be published. Required fields are marked *