Breaking News

ಗಲಭೆ ಪ್ರಕರಣದ 12 ಪ್ರಕರಣಗಳ ಪೈಕಿ 11 ಪ್ರಕರಣಗಳಿಗೆ ಹೈಕೋರ್ಟ್ ಮಧ್ಯಂತರ ತಡೆ

ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದಾಖಲಿಸಿಕೊಂಡಿದ್ದ ಪೈಕಿ 11 ಪ್ರಕರಣಗಳಿಗೆ ಹೈಕೋರ್ಟ್ ಪೀಠ, ಮಧ್ಯಂತರ ತಡೆಯಾಜ್ಞೆ ನೀಡಿದೆ. ಹಳೇ ಹುಬ್ಬಳ್ಳಿಯಲ್ಲಿ ಏ. 16ರಂದು ನಡೆದ ಗಲಭೆಗೆ ಸಂಬಂಧಿಸಿ, ಹಳೆಯ ಹುಬ್ಬಳ್ಳಿಯ ಪೊಲೀಸ್ ಠಾಣೆ ಸೇರಿದಂತೆ ಸುತ್ತಿನ ಪ್ರದೇಶದಲ್ಲಿ ಗಲಾಟೆ ಮಾಡಿದ್ದ 157 ಜನರ ವಿರುದ್ಧ 12 ಪ್ರಕರಣಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದರು.

ಒಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಲವು ದೂರುಗಳನ್ನು ದಾಖಲಿಸಿಕೊಂಡಿದ್ದ ಸರಿಯಲ್ಲ. ಹೀಗಾಗಿ ಪೊಲೀಸರು ದಾಖಲಿಸಿಕೊಂಡಿರುವ ಪ್ರಕರಣಗಳು ಅನುರ್ಜಿತಗೊಳಿಸಬೇಕು ಎಂದು ಮಹಮ್ಮದ್ ಆರೀಫ್ ನಾಗರಾಳ ಸೇರಿದಂತೆ ಇತರ 157 ಜನರು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ವಾದ- ಪ್ರತಿವಾದ ಆಲಿಸಿದ ಹೈಕೋರ್ಟ್ ನ ಏಕಸದಸ್ಯ ಪೀಠ, ಪ್ರಕರಣದ ಕುರಿತು ಹೆಚ್ಚಿನ ವಿಚಾರಣೆ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟು, ಪೊಲೀಸರು ದಾಖಲಿಸಿಕೊಂಡಿದ್ದ 12 ಪ್ರಕರಣಗಳ ಪೈಕಿ, 11 ಪ್ರಕರಣಗಳಿಗೆ ಮಧ್ಯಂತರ ತಡೆಯಾಜ್ಞೆ ನೀಡಿ, ವಿಚಾರಣೆಯನ್ನು ಜೂ. 7ಕ್ಕೆ ಮುಂದೂಡಿದೆ. ಅರ್ಜಿದಾರರ ಪರವಾಗಿ ವಕೀಲ ವಿಶ್ವನಾಥ ಬೀಚಗತ್ತಿ ವಾದ ಮಂಡಿಸಿದರು.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *