ಒಂದು ರಾತ್ರಿ ಸುರಿದ ಕುಂಭದ್ರೋಣ ಮಳೆಗೆ ಬೆಂಗಳೂರು ತತ್ತರಿಸಿದೆ. ‘ಬಿಜೆಪಿ ಎಂಬ ಬುರುಡೆ ಪಾರ್ಟಿ ‘ಮಳೆ ಬಗ್ಗೆ, ಜನರ ಕಷ್ಟದ ಬಗ್ಗೆ ಕೇಳುವುದು ಬಿಟ್ಟು, ಜೆಡಿಎಸ್ ಮತ್ತು ದೇವೇಗೌಡರ ಕುಟುಂಬದ ಬಗ್ಗೆ ಮಾತನಾಡುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ.
ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಸ್ಮಾರ್ಟ್ ಸಿಟಿ ನಡೆಯಲಿದೆ ಎಂದು ಹೊರಟವರು ಕೆಂಪೇಗೌಡರು ಕಟ್ಟಿದ ಭವ್ಯ ಬೆಂಗಳೂರು ನಗರವನ್ನು ಈಜು ಕೊಳ ಮಾಡುತ್ತಿದ್ದಾರೆ. ರಸ್ತೆಗಳು ರಾಜ ಕಾಲುವೆಗಳಾಗಿ, ಮನೆಗಳು ಕೆರೆ ಬಾವಿಗಳಾಗಿವೆ ಎಂದು ಟೀಕಿಸಿದ್ದಾರೆ.
ಈ ತಿಂಗಳ 13ನೇ ತಾರೀಖು ಮುಗಿದ ಜಲಧಾರೆ ಸಮಾರೋಪ ಸಮಾವೇಶದ ಬಗ್ಗೆ ಆರು ದಿನ ಅಧ್ಯಯನ ಮಾಡಿ ಟ್ವೀಟ್ ಮಾಡಿದೆ ಬಿಜೆಪಿ. ಇನ್ನು ಆರಂಭದ ಪಂಚರತ್ನ ಯಾತ್ರೆ ಬಗ್ಗೆ ಆಗಲೇ ಏರಿದೆ ಬೀಪಿ. ಮಿಷನ್ 123 ನಮ್ಮ ಗುರಿ. ನಿಮಗೆ ಯಾಕೆ ಉರಿ ಎಂದು ಟ್ವೀಟ್ ಮಾಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

