Breaking News

ಕಲಿತ ಶಾಲೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ


ಧಾರವಾಡ: ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಕರ್ತವ್ಯ ನಿಮಿತ್ಯವಾಗಿ ತಾವು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಪಡೆದ ಕೆ.ಇ.ಬೋರ್ಡ್ ಶಾಲೆಗೆ ಭೇಟಿ ನೀಡಿ , ಪರೀಕ್ಷೆ ಸಿದ್ಧತೆಗಳನ್ನು ಪರಿಶೀಲಿಸಿದ ಬಳಿಕ , ತಾವು ವ್ಯಾಸಂಗ ಮಾಡುತ್ತಿದ್ದ ಕಾಲದಲ್ಲಿ ಸಹಾಯಕ ಸಿಬ್ಬಂದಿಯಾಗಿದ್ದ ಬಾಬು ಹಾಗೂ ಹಾಜರಿದ್ದ ಶಿಕ್ಷಕರನ್ನು ಆತ್ಮೀಯವಾಗಿ ಮಾತನಾಡಿ ಕ್ಷೇಮ ವಿಚಾರಿಸಿದರು .

ಜಿಲ್ಲಾಧಿಕಾರಿಗಳ ಆಪ್ತತೆ , ಸರಳತೆ ಶಿಕ್ಷಕರು ಹಾಗೂ ಸಿಬ್ಬಂದಿಯನ್ನು ಪುಳಕಿತರನ್ನಾಗಿಸಿತು.ಶಾಲೆಗೆ ಮತ್ತೊಮ್ಮೆ ಪ್ರತ್ಯೇಕವಾಗಿ ಆಗಮಿಸಿ ಗೌರವ ಸ್ವೀಕರಿಸಲು ಶಿಕ್ಷಕರು ಆಹ್ವಾನ ನೀಡಿದರು . ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಎಸ್ . ಕೆಳದಿಮಠ , ಡಯಟ್ ಪ್ರಾಚಾರ್ಯ ಎನ್.ಕೆ.ಸಾತ್ಕಾರ್ , ಶಿಕ್ಷಣಾಧಿಕಾರಿ ಸುರೇಶ ಹುಗ್ಗಿ , ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಶಿವಕುಮಾರ ಪಾಟೀಲ ಸೇರಿದಂತೆ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು , ಸಿಬ್ಬಂದಿ ಉಪಸ್ಥಿತರಿದ್ದರು .

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *