Breaking News

ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆಗೆ ಸರ್ಕಾರ ಸ್ಪಂದಿಸಬೇಕು : ವೀರಣ್ಣ ಮತ್ತಿಕಟ್ಟಿ


ಧಾರವಾಡ : ಪೇಡಾ ನಗರಿ ಪ್ರತ್ಯೇಕ ಮಹಾನಗರ ಪಾಲಿಕೆ ಆಗುವ ನಿಟ್ಟಿನಲ್ಲಿ ಸರ್ಕಾರ ಕೂಡಲೇ ಸಕಾರಾತ್ಮಕವಾಗಿ ಸ್ಪಂದಿಸಬೇಕು ಜೊತೆಗೆ ನವೆಂಬರ್ ಒಳಗೆ ಪ್ರತ್ಯೇಕ ಪಾಲಿಕೆ ಮಾಡುವ ನಿಟ್ಟಿನಲ್ಲಿ ಕ್ರಮ ವಹಿಸಬೇಕು ಎಂದು ವಿಧಾನ ಪರಿಷತ್ ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ ಆಗ್ರಹಿಸಿದರು.

ಧಾರವಾಡದಲ್ಲಿ ಮಾತಾನಾಡಿದ ಅವರು ಹು – ಧಾ ಅವಳಿ ನಗರ ಪಾಲಿಕೆಯಿಂದ ಅನುದಾನ ಹಂಚಿಕೆಯಲ್ಲಿ ಧಾರವಾಡಕ್ಕೆ ತಾರತಮ್ಯ ಆಗುತ್ತಿದೆ . ಅಭಿವೃದ್ಧಿಗೆ ಅಗತ್ಯ ಅನುದಾನ ಸಿಗದ ಕಾರಣ ನಿರೀಕ್ಷಿತ ಪ್ರಮಾಣದಲ್ಲಿ ಧಾರವಾಡ ಸೌಕರ್ಯಗಳನ್ನು ಹೊಂದಲು ಸಾಧ್ಯವಾಗುತ್ತಿಲ್ಲ ಈ ಕಾರಣದಿಂದ ಜನರು ಪ್ರತ್ಯೇಕ ಪಾಲಿಕೆ ಬಯಸುತ್ತಿದ್ದಾರೆ . ಈ ದಿಸೆಯಲ್ಲಿ ಈಗಾಗಲೇ ಅನೇಕ ಹೋರಾಟಗಳು ಆರಂಭವಾಗಿವೆ . ತಾವು ಕೂಡ ಪ್ರತ್ಯೇಕ ಪಾಲಿಕೆ ಬೇಕು ಎಂಬ ಬೇಡಿಕೆಯ ಪರವಾಗಿದ್ದು , ಇದು ನ್ಯಾಯಸಮ್ಮತ ಕೂಡ ಎಂದರು .

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *