Breaking News

ಒಂದೇ ಠಾಣೆಯಲ್ಲಿ ಎಷ್ಟು ವರ್ಷ ಕೆಲಸ ? ಮಾಹಿತಿ ಕೇಳಿದ -ಕಮೀಷನರ್

ಹುಬ್ಬಳ್ಲಿ : ಸತತವಾಗಿ ಒಂದೇ ಪೊಲೀಸ್ ಠಾಣೆಯಲ್ಲಿ ನಾಲ್ಕು ವರ್ಷಗಳಗಿಂತ ಹೆಚ್ಚು ಅವಧಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿಗಳ ಮಾಹಿತಿ ನೀಡುವಂತೆ ಪೊಲೀಸ್ ಆಯುಕ್ತ ಲಾಬುರಾಮ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ

ಹೌದು 2022 ಏಪ್ರಿಲ್ 30 ರ ಅಂತ್ಯಕ್ಕೆ ನಾಲ್ಕು ವರ್ಷ ಪೂರ್ಣಗೊಳಿಸಿದ ಅಥವಾ ಅದಕ್ಕಿಂತ ಹೆಚ್ಚು ವರ್ಷಗಳಿಂದ ಒಂದೇ ಠಾಣೆಯಲ್ಲಿ ಕೆಲಸ ಮಾಡುತ್ತಿರುವ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿಯ ಮಾಹಿತಿ ನೀಡುವಂತೆ ಪೊಲೀಸ್ ಆಯುಕ್ತರು

ಎಲ್ಲ ಎಸಿಪಿ ಹಾಗೂ ಇನ್‌ಸ್ಪೆಕ್ಟರ್‌ಗಳಿಗೆ ಸೂಚಿಸಿದ್ದಾರೆ ಮೇ 25 ರ ಒಳಗಾಗಿ ಕಡ್ಡಾಯವಾಗಿ ಮಾಹಿತಿ ನೀಡುವಂತೆ ತಿಳಿಸಿದ್ದು ಇದರಿಂದ ಒಂದೇ ಠಾಣೆಯಲ್ಲಿ ಹಲವಾರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತ ಝಂಡಾ ಊರಿರುವ ಪೊಲೀಸರಿಗೆ ವರ್ಗಾವಣೆಯ ಬಿಸಿ ತಟ್ಟಲಿದೆ ಎನ್ನಲಾಗುತ್ತಿದೆ .

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *