Breaking News

ಧಾರವಾಡ ಶಾಲೆ, ಕಾಲೇಜು ಗಳಿಗೆ ರಜೆ ಘೋಷಣೆ

ಧಾರವಾಡ : ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದ ಎಲ್ಲಾ ಶಾಲೆ , ಕಾಲೇಜುಗಳಿಗೆ ಇಂದು ಮೇ . 20 ರಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ರಜೆ ಘೋಷಿಸಿದ್ದಾರೆ .

ಹವಾಮಾನ ಇಲಾಖೆಯು ಮಳೆ ಮುಂದುವರೆಯುವ ಸಾಧ್ಯತೆಯ ಮುನ್ಸೂಚನೆ ನೀಡಿದೆ . ಇಂದು ಮೇ . 20 ರಂದು ಜಿಲ್ಲೆಯ ಎಲ್ಲಾ ಶಾಲೆ , ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ . ನಿನ್ನೆ ಮೇ .19 ಇಡೀ ದಿನ ಮತ್ತು ರಾತ್ರಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಮಳೆಯಾಗಿದೆ . ತಾಲೂಕಿನ ನೋಡಲ್ ಅಧಿಕಾರಿಗಳು ವರದಿಗಳನ್ನು ಕಳಿಸುತ್ತಿದ್ದಾರೆ.ಜನ ಹಾಗೂ ಜಾನುವಾರುಗಳ ಸುರಕ್ಷತೆಗೆ ಸಾರ್ವಜನಿಕರು ಹೆಚ್ಚು ಮುತುವರ್ಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ .

Share News

About BigTv News

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *