ಬೆಂಗಳೂರು: ಪತ್ನಿಗೆ ಕಿರುಕುಳ ನೀಡಿದ ಆರೋಪದಡಿಯಲ್ಲಿ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಸೋದರನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬೆಂಗಳೂರಿನ ಚಂದ್ರಾಲೇಔಟ್ ಠಾಣೆಯಲ್ಲಿ ರಾಘವೇಂದ್ರ ಡಿ. ಚೆನ್ನಣ್ಣನವರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
2015ರಲ್ಲಿ ರೋಜಾ ಮತ್ತು ರಾಘವೇಂದ್ರ ಡಿ. ಚೆನ್ನಣ್ಣನವರ್ ಮದುವೆಯಾಗಿತ್ತು. ರವಿ ಡಿ.ಚನ್ನಣ್ಣನವರ್ ಮುಂದೆ ನಿಂತು ಮದುವೆ ಮಾಡಿಸಿದ್ದರು. ಆದರೆ ರೋಜಾ ಮದುವೆಗೂ ಮುನ್ನ ಮತ್ತೊಬ್ಬ ಮಹಿಳೆ ಜತೆ ಮದುವೆಯಾಗಿದ್ದನ್ನು ಬಚ್ಚಿಟ್ಟಿದ್ದ ಆರೋಪ ಕೇಳಿಬಂದಿದೆ. ಮೊದಲು ಮದುವೆಯಾಗಿದ್ದ ಮಹಿಳೆ ಜೊತೆ ಸಂಸಾರ ನಡೆಸುತ್ತಿರುವ ಆರೋಪ ಕೇಳಿಬಂದಿದೆ. ಆರಂಭದಲ್ಲಿ ಹೀಗೆ ಮಾಡುತ್ತಾರೆ, ಎಲ್ಲಾ ಸರಿಹೋಗುತ್ತೆ. ನೀನು ಉನ್ನತ ಶಿಕ್ಷಣದ ಕಡೆ ಗಮನ ಹರಿಸು ಅಂತ ಹೇಳಿದ್ದರಂತೆ.
ಸದ್ಯ ಇಬ್ಬರ ಜೊತೆಗೂ ಸಂಸಾರ ಮಾಡುವುದಾಗಿ ರಾಘವೇಂದ್ರ ಹೇಳಿಕೆ ನೀಡಿದ್ದಾರೆ. ಆದರೆ ನ್ಯಾಯ ಬೇಕೆಂದು ರೋಜಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ವರದಕ್ಷಿಣೆ ಕಿರುಕುಳ ಆರೋಪದಡಿ ಎಫ್‌ಐಆರ್ ದಾಖಲಾಗಿದೆ. ನನ್ನ ತಂದೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಮದುವೆ ಮಾಡಿಕೊಟ್ಟಿದ್ದಾರೆ. ಹಲವಾರು ಬಾರಿ ತಂದೆ ಬಳಿ ಹಣ ಪಡೆದಿದ್ದಾರೆ. ಇದೇ ವೇಳೆ ವಿಷಯವನ್ನು ಐಪಿಎಸ್ ಅಧಿಕಾರಿ ರವಿ ಡಿ. ಚೆನ್ನಣ್ಣವರ್ ಅವರ ಗಮನಕ್ಕೂ ತಂದಿರುವೆ. ಆದರೆ ಅವರೂ ಹೊಸ ಹೆಂಡತಿಯ ಜೊತೆ ಹೊಂದಿಕೊಂಡು ಹೋಗು ಎಂದು ತನಗೆ ಹೇಳಿದ್ದಾಗಿ ರೋಜಾ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಹಾಗೂ ಚಂದ್ರ ಲೇಔಟ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

