Breaking News

ಕಾವಲುಗಾರನ ಮಗಳು ಕನ್ನಡ ಮಾಧ್ಯಮದಲ್ಲಿ ರಾಜ್ಯಕ್ಕೆ ಮೊದಲನೇ ಸ್ಥಾನ


ಹಾವೇರಿ: ನಗರದ ಜಿಲ್ಲಾ ಗುರುಭವನದಲ್ಲಿ ಕಾವಲುಗಾರನಾಗಿ ಕೆಲಸ ಮಾಡುವ ಬಸವರಾಜ ಶೇತಸನದಿ ಅವರ ಮಗಳು ಮಧು ಶೇತಸನದಿ, ಕನ್ನಡ ಮಾಧ್ಯಮದಲ್ಲಿ 625ಕ್ಕೆ 625 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಮೊದಲನೇ ಸ್ಥಾನ ಪಡೆದಿದ್ದಾಳೆ.

‘ನನ್ನ ಮಗಳು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾಳೆ ಎಂಬುದನ್ನು ಕೇಳಿ ತುಂಬಾ ಸಂತೋಷವಾಗಿದೆ.ಹಾಗಲು-ರಾತ್ರಿ ಕಷ್ಟಪಟ್ಟು ಓದಿ ನಮಗೆ ಮತ್ತು ಜಿಲ್ಲೆಗೆ ಕೀರ್ತಿ ತಂದಿದ್ದಾಳೆ. ಮಗ ಪ್ರಶಾಂತ 7ನೇ ತರಗತಿ ಓದುತ್ತಿದ್ದಾನೆ’ ಎಂದು ಮಧು ಅವರ ತಂದೆ ಬಸವರಾಜ ಸಂತಸ ವ್ಯಕ್ತಪಡಿಸಿದರು.

‘ಕಳೆದ 20 ವರ್ಷಗಳಿಂದ ಕಾವಲುಗಾರನಾಗಿ ಗುರುಭವನದಲ್ಲಿ ಕೆಲಸ ಮಾಡುತ್ತಾ, ತಿಂಗಳಿಗೆ ₹15 ಸಾವಿರ ಗಳಿಸುತ್ತಿದ್ದೇನೆ. ಇದರಲ್ಲೇ ಮನೆ ಬಾಡಿಗೆ, ಮಕ್ಕಳ ಓದು ಮತ್ತು ಜೀವನ ನಡೆಯಬೇಕಿದೆ. ಮಗಳು ಡಾಕ್ಟರ್‌ ಆಗಬೇಕು ಎಂದು ಕನಸು ಕಾಣುತ್ತಿದ್ದಾಳೆ. ಅವಳನ್ನು ಓದಿಸುವಷ್ಟು ಆರ್ಥಿಕ ಶಕ್ತಿ ನಮಗಿಲ್ಲ’ ಎಂದು ನೋವು ತೋಡಿಕೊಂಡರು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *