Breaking News

ಬಿಜೆಪಿ ಕಚೇರಿಯಲ್ಲಿ ಬಸವರಾಜ ಹೊರಟ್ಟಿಗೆ ಸನ್ಮಾನ

ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷದ ಸೇರ್ಪಡೆ ಬಳಿಕ‌ ಮೊದಲ ಬಾರಿಗೆ ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿ ಹುಬ್ಬಳ್ಳಿ ಮಹಾನಗರ ಬಿಜೆಪಿ ಕಚೇರಿಗೆ ಭೇಟಿ ನೀಡಿದ ವಿಧಾನ ಪರಿಷತ್ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಪಕ್ಷದ ಪದಾಧಿಕಾರಿಗಳು ಇಂದು ಆತ್ಮೀಯವಾಗಿ ಸನ್ಮಾನಿಸಿದರು.

ಶಾಸಕ‌ ಜಗದೀಶ ಶೆಟ್ಟರ್, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಅಧ್ಯಕ್ಷ ನಾಗೇಶ ಕಲಬುರ್ಗಿ, ಹುಬ್ಬಳ್ಳಿ ಧಾರವಾಡ ಮಹಾನಗರ ಬಿಜೆಪಿ ಅಧ್ಯಕ್ಷ ಸಂಜಯ ಕಪಟಕರ, ಮುಖಂಡರಾದ ವಿಧಾನ ಪರಿಷತ್ ಮಾಜಿ ಸದಸ್ಯ ಅಶೋಕ ಕಾಟವೆ, ಮಹೇಂದ್ರ ಕೌತಾಳ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸದಸ್ಯ
ರಾಜಣ್ಣ ಕೊರವಿ, ಬಸವರಾಜ ಕುಂದಗೋಳಮಠ, ಸಂತೋಷ ಚವ್ಹಾಣ, ದತ್ತಮೂರ್ತಿ ಕುಲಕರ್ಣಿ, ಅನೇಕ ಪದಾಧಿಕಾ ರಿಗಳು ,ಕಾರ್ಯಕರ್ತರು ಭಾಗವಹಿಸಿದ್ದರು.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *