ಧಾರವಾಡ : ಮರಕ್ಕೆ ಕ್ರೂಸರ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಏಳು ಜನರು ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ಬಾಡ ಗ್ರಾಮದ ಬಳಿ ನಡೆದಿದೆ.
ಅಪಘಾತದಲ್ಲಿ ಆರು ಜನರಿಗೆ ಗಂಭೀರ ಗಾಯಗೊಂಡಿದ್ದು , ಮದುವೆ ಹಿಂದಿನ ದಿನ ನಿಶ್ಚಿತಾರ್ಥ ಮುಗಿಸಿಕೊಂಡು ವಾಹನ ಬರುತ್ತಿತ್ತು ಎನ್ನಲಾಗಿದೆ.ಗಾಯಾಳುಗಳನ್ನು ಜಿಲ್ಲಾಸ್ಪತ್ರೆ ಮತ್ತು ಕಿಮ್ಸ್ಗೆ ದಾಖಲು ಮಾಡಲಾಗಿದೆ .

ಧಾರವಾಡ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ . ಇನ್ನು ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್ ಪಿ ಕೃಷ್ಣಕಾಂತ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮನಸೂರ ಗ್ರಾಮದಿಂದ ನಿಗದಿ ( ಬೆನಕನಕಟ್ಟಿ ) ಗೆ ಹೋಗುವಾಗ ಈ ಘಟನೆ ನಡೆದಿದೆ . ಒಟ್ಟು 7 ಜನ ಸಾವನ್ನಪ್ಪಿದ್ದಾರೆ . ಚಾಲಕನ ನಿಯಂತ್ರಣ ತಪ್ಪಿ ವಾಹನ ಮರಕ್ಕೆ ಡಿಕ್ಕಿ ಸಂಭವಿಸಿದೆ . ಸಧ್ಯ ಪೊಲೀಸ್ ಅಧಿಕಾರಿಗಳು ಹೆಚ್ಚಿನ ಮಾಹಿತಿ ಕಲೆ ಹಾಕುತಿದ್ದಾರೆ . ಇನ್ನು ಅನನ್ಯ 14 , ಹರೀಶ 13 , ಶಿಲ್ಪಾ 34 , ನೀಲವ್ವ 60 , ಮಧುಶ್ರೀ 20 ಮಹೇಶ್ವರಯ್ಯ 11 , ಶಂಭುಲಿಂಗಯ್ಯ 35 , ಸಾವನ್ನಪ್ಪಿದ ದುರ್ದೈವಿಗಳಾಗಿದ್ದಾರೆ
bigtvnews | Hubli Dharwad News | Kannada News | Karnataka News Hubli News | News In Hubli | Local news

