Breaking News

ಭೀಕರ ಅಪಘಾತ : ಸಾವಿನ ಸಂಖ್ಯೆ 9 ಕ್ಕೆ ಏರಿಕೆ

ಧಾರವಾಡ : ತಾಲೂಕಿನ ಬಾಡ ಗ್ರಾಮದ ಬಳಿ ನಡೆದ ಕ್ರೂಸರ್ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 9 ಕ್ಕೆ ಏರಿಕೆಯಾಗಿದೆ . ಸ್ಥಳದಲ್ಲೇ 7 ಜನ ಸಾವನ್ನಪ್ಪಿದ್ದರು .

ತೀವ್ರವಾಗಿ ಗಾಯಗೊಂಡಿದ್ದ ಇನ್ನೂ ಕೆಲವರನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್‌ಗೆ ದಾಖಲಿಸಲಾಗಿತ್ತು . ಅದರಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಇಬ್ಬರು ಅಸುನೀಗಿದ್ದಾರೆ . ಅನನ್ಯ , ಹರೀಶ್ , ಶಿಲ್ಪಾ , ನೀಲವ್ವ , ಮಧುಶ್ರೀ , ಮಹೇಶ್ವರಯ್ಯ , ಶಂಭುಲಿಂಗಯ್ಯ , ಮನುಶ್ರೀ ಹಾಗೂ ಚೆನ್ನವ್ವ ದಾಸನಕೊಪ್ಪ ಎಂಬುವವರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ . ಮನಸೂರಿನ ರೇವಣಸಿದ್ದೇಶ್ವರ ಮಠದಲ್ಲಿ ನಿನ್ನೆ ರಾತ್ರಿ ನಿಶ್ಚಿತಾರ್ಥ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ .

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *