Breaking News

ಧಾರವಾಡ ಅಪಘಾತ : ಮೃತ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ


ಬೆಂಗಳೂರು: ಶನಿವಾರದ ನಿನ್ನೆ ರಾತ್ರಿ ಮದುವೆಗೆ ಹೊರಟಿದ್ದಂತ ಕ್ರೂಸರ್ ಮರಕ್ಕೆ ಡಿಕ್ಕಿಯಾಗಿ ಧಾರವಾಡದ ಬಾಡ ಬಳಿಯಲ್ಲಿ ಭೀಕರ ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ಪುಟ್ಟ ಮಕ್ಕಳು ಸಹಿತ 9 ಮಂದಿ ಸಾವನ್ನಪ್ಪಿದ್ದರು. ಇದೀಗ ರಾಜ್ಯ ಸರ್ಕಾರ ಮೃತ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರವನ್ನು ಘೋಷಿಸಿದೆ.

ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವಿಟ್ ಮಾಡಿದ್ದು,ಧಾರವಾಡದ ಬಾಡ ಗ್ರಾಮದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ 9 ಜನರ ಕುಟುಂಬಗಳಿಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ ಅವರ ಮನವಿಯ ಮೇರೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ ರೂ. 5 ಲಕ್ಷ ಪರಿಹಾರ ನೀಡಲಾಗುವುದು. ಈ ಅಪಘಾತ ಅತ್ಯಂತ ದುರದೃಷ್ಟಕರವಾಗಿದ್ದು, ಮೃತಪಟ್ಟ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

Share News

About BigTv News

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *