ಉಡುಪಿ: ಪೂರ್ವ ನಿರ್ಧಾರ ಮಾಡದೆ ಬಿಜೆಪಿಯನ್ನು ಸೇರಿಲ್ಲ. ಯೋಚನೆ ಮಾಡಿ ತೆಗೆದುಕೊಂಡ ನಿರ್ಧಾರವಾಗಿದ್ದು, ಪಶ್ಚಾತ್ತಾಪ ಪಡುವ ದಿನ ಬರುವುದಿಲ್ಲ. ಭವಿಷ್ಯದಲ್ಲಿ ತನ್ನ ನೆಲೆ ಕಳೆದುಕೊಂಡು ಕಾಂಗ್ರೆಸ್ ಪಶ್ಚಾತ್ತಾಪ ಪಡಬೇಕಿದೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ತಿರುಗೇಟು ನೀಡಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಜಿ.ಪಂ., ತಾ.ಪಂ. ಚುನಾವಣೆಯಲ್ಲಿ ಕಾಂಗ್ರೆಸ್ಗೆ ಇದು ಅರಿವಾಗಲಿದೆ. 2020-23ರ ಚುನಾವಣೆಯಲ್ಲಿ ಅಧಿಕಾರ ಸಿಗುತ್ತದೆ ಎಂಬ ಅಹಂನಲ್ಲಿ ಮೆರೆಯುತ್ತಿದ್ದು, ಅವರು ಪಶ್ಚಾತ್ತಾಪ ಪಡಬೇಕಾಗು ತ್ತದೆ ಎಂದರು.
ಬಿಜೆಪಿಯೊಳಗಿನ ವ್ಯವಸ್ಥೆಯಂತೆ ಸ್ಥಳೀಯ ಬಿಜೆಪಿ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅನಂತರ ಆಸಕ್ತ ಕಾರ್ಯಕರ್ತರು, ನಾಯಕರು ಬಿಜೆಪಿಗೆ ಸೇರಬಹುದು. ಈಗಾಗಲೇ ನಾನು ಈ ಬಗ್ಗೆ ಬಿಜೆಪಿ ಜಿಲ್ಲಾಧ್ಯಕ್ಷರ ಜತೆಗೆ ಚರ್ಚಿಸಿದ್ದೇನೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

