ಧಾರವಾಡ : ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಬಸವರಾಜ ಹೊರಟ್ಟಿ ಅವರಿಗೆ ಟಿಕೆಟ್ ವಿಚಾರವಾಗಿ ನಮ್ಮ ಪಾರ್ಟಿ ಈ ಬಗ್ಗೆ ಅಧಿಕೃತವಾಗಿ ಘೋಷಿಸಲಿದೆ
ಟಿಕೆಟ್ ಹೊರಟ್ಟಿ ಅವರಿಗೆ ಫೈನಲ್ ಆಗುತ್ತದೆ ಎಂದು ಶಾಸಕ ಅರವಿಂದ ಬೆಲ್ಲದ್ ಹೇಳಿದ್ದಾರೆ .
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಬಸವರಾಜ ಹೊರಟ್ಟಿ ಅವರಿಗೆ ಟಿಕೆಟ್ ಫೈನಲ್ ಆಗುತ್ತದೆ . ಮೋಹನ್ ಲಿಂಬಿಕಾಯಿ ಮೊದಲಿನಿಂದಲೂ ಪ್ರಯತ್ನಿಸುತ್ತಿದ್ದಾರೆ .ಬಿಜೆಪಿ ಟಿಕೆಟ್‌ಗಾಗಿ ಸಾಕಷ್ಟು ಪ್ರಯತ್ನ ನಡೆಸಿದ್ದಾರೆ . ಆದರೆ ಹೊರಟ್ಟಿ ಅವರಿಗೆ ಟಿಕೆಟ್ ಫೈನಲ್ ಆಗುತ್ತದೆ ಎಂದರು . ಟಿಕೆಟ್ ಫೈನಲ್ ಆಗೋದಕ್ಕಿಂತ ಮುಂಚೆ ಬಿಜೆಪಿ ಕಚೇರಿ ಉದ್ಘಾಟನೆ ವಿಚಾರವಾಗಿ ಚುನಾವಣೆ ಕೆಲಸ ಬಹಳ ಇರುತ್ತದೆ .
ಹೀಗಾಗಿ ಕಚೇರ ಆರಂಭಿಸಿದ್ದಾರೆ ನಿನ್ನೆ ಪಕ್ಷ ವರಿಷ್ಠರನ್ನು ಭೇಟಿಯಾಗಿದ್ದಾರೆ . ಈ ಹಿನ್ನೆಲೆಯಲ್ಲಿ ತಯಾರಿ ನಡೆಸಿದ್ದಾರೆ .ಟಿಕೆಟ್ ಸಿಗುವ ಭರವಸೆಯ ಅವರಿಗಿದೆ . ಹೀಗಾಗಿ ಸಿದ್ಧತೆ ನಡೆಸಿದ್ದಾರೆ . ಇನ್ನು ಲಿಂಬಿಕಾಯಿ ಪಕ್ಷೇತರರಾಗಿ ಕಣಕ್ಕಿಳಿಯೋ ವಿಚಾರವಾಗಿ , ಅದನ್ನು ನೀವು ಅವರಿಗೆ ಕೇಳಬೇಕು ಅದರ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಶಾಸಕ ಬೆಲ್ಲದ ಹೇಳಿದರು .
bigtvnews | Hubli Dharwad News | Kannada News | Karnataka News Hubli News | News In Hubli | Local news

