Breaking News

ವಿಗ್ರಹ ಕದ್ದ ಕಳ್ಳರು: ಸ್ಥಳಕ್ಕೆ ಪೋಲಿಸರು ಭೇಟಿ


ಬೆಳಗಾವಿ: ದೇವಸ್ಥಾನದ ಗರ್ಭಗುಡಿಯಲ್ಲಿದ್ದ ದೇವರ ವಿಗ್ರಹವನ್ನು ಕಳ್ಳರು ಕದ್ದಿರುವ ಘಟನೆ. ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರ ಗ್ರಾಮದಲ್ಲಿ ನಡೆದಿದೆ. ಕೊಕಟನೂರ ಗ್ರಾಮದ ಬೀರೇಶ್ವರ ದೇವಸ್ಥಾನದ ದೇವರ ವಿಗ್ರಹ ಕದ್ದು ಪರಾರಿಯಾಗಿದ್ದು, ತಡರಾತ್ರಿ ನಡೆದ ಈ ಘಟನೆ ಬೆಳಿಗ್ಗೆ ಪೂಜಾರಿ ಪೂಜೆಗೆ ಬಂದಾಗ ಬೆಳಕಿಗೆ ಬಂದಿದೆ. ವಾಮಾಚಾರಿಗಳು, ನಿಧಿಗಳ್ಳರು ದೇವರ ಮೂರ್ತಿ ಕಳ್ಳತನ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *