Breaking News

ತೈಲ ಬೆಲೆ ಇಳಿಕೆ ಕುರಿತು ವ್ಯಂಗ್ಯ ಮಾಡಿದ ರಾಹುಲ್ ಗಾಂಧಿ


ಕೇಂದ್ರ ಸರ್ಕಾರದ ತೈಲ ಬೆಲೆ ಇಳಿಕೆಯ ನಿರ್ಧಾರವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವ್ಯಂಗ್ಯ ಮಾಡಿದ್ದು, ಇನ್ನು ನಿತ್ಯ ಬೆಲೆ ಏರಿಕೆ ನೀರಿಕ್ಷಿಸಬಹುದು ಎಂದು ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಇನ್ನು ಪುನಃ ಪ್ರತಿದಿನವೂ 0.8 ಮತ್ತು 0.3 ಏರಿಕೆಯನ್ನು ನಿರೀಕ್ಷಿಸಬಹುದು’ ಎಂದು ಟ್ವೀಟ್ ಮಾಡಿದ್ದಾರೆ. ಈ ಮೂಲಕ ಕೇಂದ್ರ ಸರಕಾರದ ವಿರುದ್ಧ ಮತ್ತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘ಮೇ 1, 2020ರಲ್ಲಿ ಒಂದು ಲೀಟರ್‌ ಪೆಟ್ರೋಲ್‌ ದರ 69.5ರೂ ಇತ್ತು. ಮಾರ್ಚ್‌ 1, 2020ರಲ್ಲಿ ಪೆಟ್ರೋಲ್‌ ಬೆಲೆ 95.4ರೂ ಇತ್ತು. ಮೇ 1, 2022ರಲ್ಲಿ 105.4ರೂ ಇತ್ತು. ಇದೀಗ ಮೇ 22, 2022ರಂದು 96.7ರೂ ಇದೆ’ ಎಂದು ರಾಹುಲ್‌ ಗಾಂಧಿ ದರ ಪಟ್ಟಿ ಮಾಡಿದ್ದಾರೆ.

ಹಣದುಬ್ಬರ ನಿಯಂತ್ರಿಸಲು ಮತ್ತು ಅಗತ್ಯ ವಸ್ತುಗಳ ದರ ಏರಿಕೆ ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರವು ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಎಕ್ಸೈಸ್‌ ಸುಂಕವನ್ನು ಪ್ರತಿ ಲೀಟರಿಗೆ ಕ್ರಮವಾಗಿ 8ರೂ ಮತ್ತು 6ರೂ ಕಡಿತ ಮಾಡಿದ ಬೆನ್ನಲ್ಲೇ ರಾಹುಲ್‌ ಗಾಂಧಿ ಪ್ರತಿಕ್ರಿಯಿಸಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *