Breaking News

ಲೈಸೆನ್ಸ್ ಇಲ್ಲದೇ ಬಸ್ ಚಾಲನೆ : ಮಾಜಿ ಶಾಸಕ ವಿರುದ್ಧ ಪ್ರಕರಣ ದಾಖಲು


ದಾವಣಗೆರೆ: ಲೈಸೆನ್ಸ್ ಇಲ್ಲದೇ ಬಸ್ ಓಡಿಸಿದ್ದ ಮಾಜಿ ಸಚಿವ, ಶಾಸಕ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ದಾವಣಗೆರೆ ಜಿಲ್ಲೆಯ ಬೈರನಹಳ್ಳಿ ಗ್ರಾಮದಲ್ಲಿ ಬಸ್ ಸೌಲಭ್ಯವಿಲ್ಲದೇ ವಿದ್ಯಾರ್ಥಿಗಳು ಸಂಕಷ್ಟಕ್ಕೀಡಾಗಿದ್ದರು. ಬಸ್ ಸೌಲಭ್ಯ ಕಲ್ಪಿಸಿಕೊಡುವಂತೆ ಶಾಸಕರ ಬಳಿ ವಿದ್ಯಾರ್ಥಿಗಳು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಖುದ್ದು ಶಾಸಕ ಎಂ.ಪಿ. ರೇಣುಕಾಚಾರ್ಯ ಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸಿದ್ದರಲ್ಲದೇ ಕೆ ಎಸ್ ಆರ್ ಟಿ ಸಿ ಬಸ್ ತಾವೇ ಚಲಾಯಿಸಿ ಗಮನ ಸೆಳೆದಿದ್ದರು.

ಗ್ರಾಮಕ್ಕೆ ಬಸ್ ಓಡಿಸಿಕೊಂಡು ಬಂದ ಶಾಸಕರನ್ನು ಕಂಡು ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ. ಈ ಹಿಂದೆಯೂ ಶಾಸಕರು ಬಸ್ ಓಡಿಸಿ ಗಮನ ಸೆಳೆದಿದ್ದರು. ಲೈಸನ್ಸ್ ಇಲ್ಲದೇ ಶಾಸಕ ರೆಣುಕಾಚಾರ್ಯ ಬಸ್ ಓಡಿಸಿದ್ದಕ್ಕಾಗಿ ಇದೀಗ ಶಾಸಕರ ವಿರುದ್ಧ ಕೇಸ್ ದಾಖಲಾಗಿದೆ.

Share News

About BigTv News

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *