Breaking News

‘ನಾನು ಇದುವರೆಗೂ ಗೋ ಮಾಂಸ ತಿಂದಿಲ್ಲ. ತಿನ್ನಬೇಕು ಅನ್ನಿಸಿದರೆ ತಿನ್ನುತ್ತೇನೆ’ : ಸಿದ್ದರಾಮಯ್ಯ


ತುಮಕೂರು: ‘ನಾನು ಇದುವರೆಗೂ ಗೋ ಮಾಂಸ ತಿಂದಿಲ್ಲ. ತಿನ್ನಬೇಕು ಅನ್ನಿಸಿದರೆ ತಿನ್ನುತ್ತೇನೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

‘ಸಗಣಿ, ಗಂಜಲ ಎತ್ತದ, ಹಸು ಸಾಕದ, ಉಳಿಮೆ ಮಾಡದವರು ಗೋ ಹತ್ಯೆ ಬಗ್ಗೆ ಮಾತನಾಡುತ್ತಾರೆ.
ಅವರಿಂದ ನಾವು ಪಾಠ ಕಲಿಯಬೇಕೆ’ ಎಂದು ಪ್ರಶ್ನಿಸಿದರು.

‘ಅಲ್ಪ‌ ಸಂಖ್ಯಾತರ ಹಕ್ಕುಗಳು, ಅವರ ಪರವಾಗಿ ಮಾತನಾಡಿದರೆ, ಸಂಘ ಪರಿವಾರದವರು ನೀನು ಮುಸ್ಲಿಂ ಸಮುದಾಯದಲ್ಲಿ ಹುಟ್ಟಿದ್ದಿಯಾ ಎಂದು ಕೇಳುತ್ತಾರೆ. ನಮ್ಮ ಧರ್ಮದಲ್ಲಿ ನಿಷ್ಠೆಯ ಜತೆಗೆ ಇತರೆ ಧರ್ಮಗಳನ್ನು ಗೌರವಿಸುವ ಸಹಿಷ್ಣುತೆ ಇರಬೇಕು. ಪರ ಧರ್ಮದ ಬಗ್ಗೆ ದ್ವೇಷ, ಅಸೂಯೆ ಇದ್ದರೆ ನಾವು ಮನುಷ್ಯರಾಗಲು ಅರ್ಹರಲ್ಲ. ನಾವೆಲ್ಲ ಮನುಷ್ಯರಾಗಿ ಬದುಕುವುದನ್ನು ಕಲಿಯಬೇಕು’ ಎಂದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *