Breaking News

ಮಾಜಿ ಸಿಎಂನಿಂದ ಸಿಎಂಗೆ ಸಲಹೆ

ಬೆಂಗಳೂರು : ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸುಂಕ ಕಡಿತ ಮಾಡಿದ ರೀತಿಯಲ್ಲೇ ರಾಜ್ಯ ಸರ್ಕಾರವೂ ಸುಂಕ ಕಡಿತ ಮಾಡಿದಲ್ಲಿ ಜನತೆಗೆ ಹೆಚ್ಚಿನ ಸಹಾಯವಾಗಲಿದೆ.ಈ ನಿಟ್ಟಿನಲ್ಲಿ ಆಲೋಚನೆ ಮಾಡಬೇಕೆಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸಲಹೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೈಲ ಬೆಲೆ ಏರಿಕೆಯ ಸಂಕಷ್ಟದಲ್ಲಿ ಇಡೀ ದೇಶದ ಜನತೆ ಇದ್ದಾಗ ಬಹಳ ದೊಡ್ಡ ಮನಸ್ಸು ಮಾಡಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸುಂಕ ಕಡಿತ ಮಾಡಿದ್ದಾರೆ.

ರಾಜ್ಯದಲ್ಲಿಯೂ ಸುಂಕ ಕಡಿತ ಮಾಡಿದರೆ ಸಾಮಾನ್ಯ ಜನರಿಗೆ ಅನುಕೂಲವಾಗಲಿದೆ. ಆ ಕೆಲಸವನ್ನು ಬೊಮ್ಮಾಯಿ ಸರ್ಕಾರ ಮಾಡಬೇಕು ಎಂದು ವಿನಂತಿ ಮಾಡುತ್ತೇನೆ. ಪ್ರಧಾನಿ ಮೋದಿ ತೆಗೆದುಕೊಂಡಿರುವ ಈ ತೀರ್ಮಾನಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *