Breaking News

ಬಸ್ , ಲಾರಿ ಮುಖಾಮುಖಿ ಡಿಕ್ಕಿ‌: 6 ಸಾವು, 26 ಜನರಿಗೆ ಗಾಯ

ಹುಬ್ಬಳ್ಳಿ : ಖಾಸಗಿ ಬಸ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ  ಹುಬ್ಬಳ್ಳಿ ಹೊರವಲಯದ ತಾರಿಹಾಳ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ‌ ನಡೆದಿದೆ.

ಸ್ಥಳದಲ್ಲಿಯೇ ಆರು ಜನರ ಸಾವುನಪ್ಪಿದ್ದು, 26 ಜನರಿಗೆ ಗಾಯವಾಗಿದೆ. ಕೆಲವರ ಸ್ಥಿತಿ ಗಂಭೀರವಾಗಿದೆ.  ಮಹಾರಾಷ್ಟ್ರ ದ ಕೊಲ್ಹಾಪುರದಿಂದ ಬೆಂಗಳೂರಿಗೆ ಹೊರಟಿದ್ದ ಬಸ್ಧಾರವಾಡ ದ ಕಡೆ ಹೊರಟಿದ್ದ ಲಾರಿ ಮುಖಾಮುಖಿಯಾಗಿ ಅಪಘಾತವಾಗಿದೆ. ಮೃತರೆಲ್ಲರೂ ಮಹಾರಾಷ್ಟ್ರದ ಕೊಲ್ಹಾಪುರಕ್ಕೆ ಸೇರಿದವರು‌ ಎಂದು ಗೊತ್ತಾಗಿದೆ.

ಗಾಯಾಳುಗಳು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಘಟನಾ ಸ್ಥಳಕ್ಕೆ ಪೊಲೀಸ್ ಕಮೀಷನರ್ ಲಾಭೂ ರಾಮ್ ಭೇಟಿ ನೀಡಿದ್ದಾರೆ. ನಂತರ ಕಿಮ್ಸ್  ಆಸ್ಪತ್ರೆಗೂ ಭೇಟಿ ನೀಡಿದ ಲಾಭೂ ರಾಮ್ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಲಾಭೂ ರಾಮ್
ಘಟನೆಯಲ್ಲಿ ಆರು ಜನ ಸಾವನ್ನಪ್ಪಿದ್ದಾರೆ ಅಪಘಾತ ಹೇಗಾಯಿತು ಎಂದು ಪರಿಶೀಲಿಸಲಾಗುತ್ತಿದೆ.


ಗಾಯಾಳುಗಳಿಗೆ ಕಿಮ್ಸ್ ನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಕಮೀಷನರ್ ಹೇಳಿದ್ದಾರೆ. ಕೊಲ್ಹಾಪುರದಿಂದ ಬೆಂಗಳೂರಿಗೆ ಹೊರಟಿದ್ದೆವೆ ಗಾಢ ನಿದ್ದೆಯಲ್ಲಿದ್ದಾಗ ಅಪಘಾತವಾಗಿದೆ ಎಂದ ಗಾಯಾಳುಗಳು ಹೇಳಿಕೆ ನೀಡಿದ್ದಾರೆ
ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *