Breaking News

ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದು ಶಾಲೆಗಳು, ಆಸ್ಪತ್ರೆಗಳಿಗೆ ನೀಡಲಾಗುವುದು : ಆದಿತ್ಯನಾಥ್


ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದು ಶಾಲೆಗಳು, ಆಸ್ಪತ್ರೆಗಳಿಗೆ ನೀಡಲಾಗುವುದು ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಉತ್ತರ ಪ್ರದೇಶದ ಮಸೀದಿಗಳಲ್ಲಿನ ಕೆಲವು ಧ್ವನಿವರ್ಧಕಗಳ ಧ್ವನಿ ಕಡಿಮೆ ಮಾಡಲಾಗಿದೆ. ಕೆಲವನ್ನು ತೆಗೆದುಹಾಕಲಾಗಿದೆ.ತೆಗೆದುಹಾಕಲಾದ ಧ್ವನಿವರ್ಧಕಗಳನ್ನು ಶಾಲೆಗಳು ಮತ್ತು ಆಸ್ಪತ್ರೆಗಳಿಗೆ ದಾನ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಇತ್ತೀಚಿನ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಮತ್ತು ನಂತರ ಬಿಜೆಪಿ ಆಡಳಿತದ ಉತ್ತರ ಪ್ರದೇಶ ರಾಜ್ಯದಲ್ಲಿ ಯಾವುದೇ ಗಲಭೆಗಳು ನಡೆದಿಲ್ಲ ಎಂದು ಆರ್‌.ಎಸ್‌.ಎಸ್. ಸಂಯೋಜಿತ ವಾರಪತ್ರಿಕೆಗಳಾದ ‘ಪಾಂಚಜನ್ಯ’ ಮತ್ತು ‘ಆರ್ಗನೈಸರ್’ ಆಯೋಜಿಸಿದ್ದ ಮಾಧ್ಯಮ ಸಂವಾದವನ್ನು ಉದ್ದೇಶಿಸಿ ಮಾತನಾಡಿದ ಆದಿತ್ಯನಾಥ್ ಹೇಳಿದ್ದಾರೆ.

Share News

About BigTv News

Check Also

ಅಪ್ರಾಪ್ತರಿಗೆ ಲೈಂಗಿಕ ಕಿರುಕುಳ: ಮಂಗಳೂರಿನ ಧರ್ಮಗುರು ವಿರುದ್ಧ ಮತ್ತೊಂದು ಕೇಸ್

ಮಂಗಳೂರು: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಚರ್ಚ್‌ನ ಧರ್ಮಗುರು ಫಾ. ಸಿಪ್ರಿಯನ್ ಪಿಂಟೋ (65) …

Leave a Reply

Your email address will not be published. Required fields are marked *