Breaking News

ಮಾಜಿ ಸಿಎಂ ಪುತ್ರನಿಗೆ ಬಿಗ್ ಶಾಕ್ ಕೊಟ್ಟ ಹೈಕಮಾಂಡ್

ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಂಡಿದ್ದು , ಕೊನೆಗೂ ಕುತೂಹಲಕ್ಕೆ ತೆರೆಬಿದ್ದಿದ್ದೆ . ವಿಶೇಷವೆಂದರೆ , ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿಜೆಪಿ ರಾಜ್ಯ ನಾಯಕ ಬಿವೈ ವಿಜಯೇಂದ್ರ ಅವರಿಗೆ ಟಿಕೆಟ್ ನೀಡಲು ಹೈಕಮಾಂಡ್ ನಿರಾಕರಿಸಿದೆ .

ಲಿಂಗಾಯತ ಕೋಟಾದಲ್ಲಿ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷರಾಗಿರುವ ಧಾರವಾಡದ ಲಿಂಗರಾಜ್ ಪಾಟೀಲ್ , ಮಹಿಳಾ ಹಾಗೂ ಒಕ್ಕಲಿಗ ಕೋಟಾದಲ್ಲಿ ಶಿವಮೊಗ್ಗ ಮೂಲದ ಸಿ . ಮಂಜುಳಾ , ದಲಿತ ಕೋಟಾದಲ್ಲಿ ಎಸ್‌ಸಿ ಘಟಕದ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣ ಸ್ವಾಮಿ ಹಾಗೂ ಒಬಿಸಿ ಕೋಟಾದಲ್ಲಿ ಪಕ್ಷದ ಕಚೇರಿ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದ ಕೇಶವ ಪ್ರಸಾದ್ ಅವರಿಗೆ ಬಿಜೆಪಿ ಪರಿಷತ್ ಟಿಕೆಟ್ ನೀಡಿದೆ . ಈ ಮೂಲಕ ಪರಿಷತ್ ಟಿಕೆಟ್ ಆಕಾಂಕ್ಷಿಯಾಗಿದ್ದ ವಿಜಯೇಂದ್ರ ಅವರ ಆಸೆಗೆ ಹೈಕಮಾಂಡ್ ತಣ್ಣೀರೆರಚಿದೆ .

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *