Breaking News

ಹೊರಟ್ಟಿ ಅವರನ್ನು ಬಿಜೆಪಿಗರೇ ಸೋಲಿಸುವ ಅನುಮಾನವಿದೆ: ಗುರುರಾಜ್ ಹುನಸಿಮರದ

ಹುಬ್ಬಳ್ಳಿ: ಜೆಡಿಎಸ್ ಮುಖಂಡ ಹಾಗೂ ವಿಧಾನ ಪರಿಷತ್ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಆದರೆ ಅವರಿಗೆ ಪಕ್ಷದಿಂದ ಟಿಕೆಟ್ ಕೊಟ್ಟಿರುವುದೇ ಆ ಪಕ್ಷದ ನಾಯಕರು, ಕಾರ್ಯಕರ್ತರಿಗೆ ಅಸಮಾಧಾನವಿದೆ. ಹೀಗಾಗಿ ಬಿಜೆಪಿಯವರೇ ಬಸವರಾಜ ಹೊರಟ್ಟಿ ಅವರನ್ನು ಸೋಲಿಸುವ ಅನುಮಾನವಿದೆ ಎಂದು ಜೆಡಿಎಸ್ ಧಾರವಾಡ ಜಿಲ್ಲಾಧ್ಯಕ್ಷ ಗುರುರಾಜ್ ಹುನಸಿಮರದ ವ್ಯಂಗ್ಯವಾಡಿದರು.

ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಿಂದ ಬಸವರಾಜ ಹೊರಟ್ಟಿ ಅವರು ಪಶ್ಚಿಮ ಶಿಕ್ಷಕರ ಅಭ್ಯರ್ಥಿಯಾಗಿ ಕಳೆದ ಹಲವಾರು ವರ್ಷಗಳಿಂದ ಸ್ಪರ್ಧಿಸಿ ನಿರಂತರವಾಗಿ ಆಯ್ಕೆಯಾಗುತ್ತಿದ್ದರು. ಆದರೆ ಅವರು ಪಕ್ಷ ತೊರೆದು ಬಿಜೆಪಿ ಸೇರ್ಪಡೆಗೊಂಡ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದಿಂದ ನಿವೃತ್ತ ಶಿಕ್ಷಕ ಶ್ರೀಶೈಲ ಗುಡದಿನ್ನಿ ಅವರನ್ನು ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಲು ಪಕ್ಷದ ಹೈಕಮಾಂಡ್ ತಿರ್ಮಾಣಿಸಿದೆ ಎಂದರು.

ಬೈಟ್: ಗುರುರಾಜ್ ಹುನಸಿಮರದ, ಜಿಲ್ಲಾಧ್ಯಕ್ಷ, ಜೆಡಿಎಸ್

ವಿಧಾನ ಪರಿಷತ್ ಪಶ್ಚಿಮ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಧಿಕೃತ ಅಭ್ಯರ್ಥಿ ಶ್ರೀಶೈಲ ಗಡದಿನ್ನಿ ಮಾತನಾಡಿ, ಶಿಕ್ಷಣ ಕ್ಷೇತ್ರ ಹಲವಾರು ಸಮಸ್ಯೆಗಳನ್ನು ಅನುಭವಿಸುತ್ತಿದೆ. ಗೊಂದಲದ ಗೂಡಾಗಿದೆ. ಈ ದಿಸೆಯಲ್ಲಿ ಶಿಕ್ಷಕರ ಸಮಸ್ಯೆ ಪರಿಹರಿಸಲು ಭ್ರಷ್ಟಾಚಾರ ರಹಿತ ಶಿಕ್ಷಣ ಇಲಾಖೆ ಮಾಡುವ ಉದ್ದೇಶದಿಂದ ಕಣಕ್ಕೆ ಇಳಿಸಿದ್ದೇನೆ. ಮೇ.25 ರಂದು ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಶಿಕ್ಷಕರ ಸಂಘಟನೆಗಳ ಸದಸ್ಯರು, ಕಾಯಕ ಸಮಾಜದ ಸದಸ್ಯರು ಸೇರಿದಂತೆ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಕೆ ಮಾಡಲಿದ್ದೇನೆ ಎಂದರು.

ಬೈಟ್: ಶ್ರೀಶೈಲ ಗಡದಿನ್ನಿ, ಅಭ್ಯರ್ಥಿ

Share News

About BigTv News

Check Also

ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ: ಮೂವರ ದುರ್ಮರಣ, ವ್ಯಕ್ತಿಗೆ ಗಾಯ..!

ಹುಬ್ಬಳ್ಳಿ: ಖಾಸಗಿ ಟ್ರಾವೆಲ್ಸ್ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ವ್ಯಕ್ತಿಯೋರ್ವನಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಹುಬ್ಬಳ್ಳಿ …

Leave a Reply

Your email address will not be published. Required fields are marked *

You cannot copy content of this page