ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಜೂನ್ 3 ರಂದು ನಡೆಯುವ ಚುನಾವಣೆಗೆ ಕಾಂಗ್ರೆಸ್,ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಏಳು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಏಳು ಅಭ್ಯರ್ಥಿಗಳು ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರಿಂದ ಅವಿರೋಧ ಆಯ್ಕೆ ಖಚಿತವಾಗಿದೆ.ನಾಮಪತ್ರ ಸಲ್ಲಿಕೆಗೆ ಮಂಗಳವಾರ ಕೊನೆಯ ದಿನವಾಗಿದ್ದರಿಂದ ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.
ಆಡಳಿತ ಪಕ್ಷ ಬಿಜೆಪಿಯಿಂದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಛಲವಾದಿ ನಾರಾಯಣಸ್ವಾಮಿ, ಕೇಶವ ಪ್ರಸಾದ್ ಹಾಗೂ ಹೇಮಲತಾ ನಾಯಕ್ ಅವರು ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್‌ನಿಂದ ವಿಧಾನ ಪರಿಷತ್ ಮಾಜಿ ಸದಸ್ಯ ಅಬ್ದುಲ್ ಜಬ್ಟಾರ್ ಹಾಗೂ ನಾಗರಾಜ ಯಾದವ್ ಅವರು ನಾಮಪತ್ರ ಸಲ್ಲಿಸಿದರು. ಜೆಡಿಎಸ್‌ನಿಂದ ವಿಧಾನ ಪರಿಷತ್ ಮಾಜಿ ಸದಸ್ಯ ಟಿ.ಎ. ಶರವಣ ನಾಮಪತ್ರ ಸಲ್ಲಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

