Breaking News

ಹುಲಿಗೆಮ್ಮ ರಥೋತ್ಸವಕ್ಕೆ ಹರಿದ ಬಂದ ಭಕ್ತ ಸಾಗರ


ಮುನಿರಾಬಾದ: ಇಲ್ಲಿನ ಪ್ರಸಿದ್ಧ ಪುಣ್ಯಕ್ಷೇತ್ರ ಹುಲಿಗೆಮ್ಮ ದೇವಿಯ ಮಹಾರಥೋತ್ಸವವು ಮಂಗಳವಾರ 3 ಲಕ್ಷಕ್ಕೂ ಹೆಚ್ಚು ಭಕ್ತರ ‘ಉಧೋ, ಉಧೋ, ಹುಲಿಗೆಮ್ಮ ತಾಯಿ’ ಹರ್ಷೋದ್ಗಾರದ ಮಧ್ಯೆ ವಿಜೃಂಭಣೆಯಿಂದ ಜರುಗಿತು. ದೇವಸ್ಥಾನದ ಅರ್ಚಕರು ಅಮ್ಮನವರ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿರಿಸಿ ದೇವಸ್ಥಾನದ ಸುತ್ತ ಪ್ರದರ್ಶನ ಹಾಕಿದರು.

ನಂತರ ಅಮ್ಮನವರ ಉತ್ಸವ ಮೂರ್ತಿಯನ್ನು ರಥದಲ್ಲಿ ಕೂರಿಸುತ್ತಿದ್ದಂತೆ ಭಕ್ತರ ಹರ್ಷೋದ್ಗಾರ ಮುಗಿಲು ಮುಟ್ಟಿತು. ಹುಲಿಗೆಮ್ಮ ದೇವಿ ಉತ್ಸವಮೂರ್ತಿ ಹೊತ್ತ ರಥ ದೇವಸ್ಥಾನದಿಂದ ಮುದ್ದಮ್ಮ ಕಟ್ಟೆಯವರಿಗೆ ಹೋಗಿ, ಬಳಿಕ ದೇವಸ್ಥಾನಕ್ಕೆ ಮರಳಿತು. ರಥೋತ್ಸವದ ಸಂದರ್ಭದಲ್ಲಿ ನೆರೆದಿದ್ದ ಲಕ್ಷಾಂತರ ಭಕ್ತಾದಿಗಳು ಬಾಳೆಹಣ್ಣು ಹಾಗೂ ಉತ್ತತ್ತಿಯನ್ನು ರಥದ ಮೇಲೆ ಎಸೆದು ಭಕ್ತಿ ಸಮರ್ಪಿಸಿದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *