ಭದ್ರಾವತಿ:’ತ್ರಿವಿಧ ದಾಸೋಹ ಸೇವೆ ಮೂಲಕ ಸಮಾಜಕ್ಕೆ ಕೊಡುಗೆ ನೀಡಿದರೆ ಭವಿಷ್ಯದ ಪೀಳಿಗೆಗೆ ಉತ್ತಮ ಮಾರ್ಗ ನೀಡಿದಂತೆ’ ಎಂದು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಹೇಳಿದರು.
ಬಿಳಿಕಿ ಹಿರೇಮಠದ ಗುರುಸಿದ್ಧ ಶಿವಾಚಾರ್ಯರ ದಾಸೋಹ ಭವನ ಶಂಕುಸ್ಥಾಪನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
‘ಸಂಸ್ಕೃತಿ, ಬದುಕನ್ನು ಇತರರಿಗೆ ಕಟ್ಟಿಕೊಡುವ ಕೆಲಸವನ್ನು ಮಠ ಮಾನ್ಯಗಳು ಮಾಡುತ್ತಿದ್ದು ಇದಕ್ಕೆ ಎಲ್ಲಾ ರೀತಿಯ ಸಹಕಾರವನ್ನು ಸಮಾಜ ನೀಡಬೇಕು’ಎಂದು ಹೇಳಿದರು.
ಶಾಸಕ ಬಿ.ಕೆ. ಸಂಗಮೇಶ್ವರ ಮಾತನಾಡಿ ‘ಈಭಾಗದ ಜನರಲ್ಲಿ ಧಾರ್ಮಿಕ ಪ್ರಜ್ಞೆ ಮೂಡಿಸುವ ಕೆಲಸವನ್ನು ಶ್ರೀಮಠ ಮಾಡುತ್ತಿದ್ದು ಇದರಿಂದ ಇಲ್ಲಿನ ಪ್ರಗತಿಯು ಸಹ ಹೆಚ್ಚಿದೆ’ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

