ಹುಬ್ಬಳ್ಳಿ: ಇಲ್ಲಿಯ ಮಹಾನಗರ ಪಾಲಿಕೆಯಲ್ಲಿ ನಿಲ್ಲಿಸಿದ್ದ ಎರಡು ಕಾರು ಹಾಗೂ ಕಸ ಸಾಗಾಟ ಮಾಡುತ್ತಿದ್ದ ವಾಹನದ ಮೇಲೆ ಗಣೇಶ ಪೇಟ್ ನಲ್ಲಿನ ಮೊಹ್ಮದ್ ಆಸೀಫ್ ಎಂಬಾತನಿಂದ ವಾಹನಗಳ ಮೇಲೆ ಪಾಲಿಕೆ ಆಯುಕ್ತರಿಗೆ ಅವಾಚ್ಯವಾಗಿ ನಿಂದನೆ ಮಾಡುತ್ತಾ ಏಕಾಏಕಿ ಕಲ್ಲಿನಿಂದ ದಾಳಿ ನಡೆಸಿದ್ದಾರೆ.

ಇಂದು ಮುಂಜಾನೆ 8.30ಕ್ಕೇ ಪಾಲಿಕೆ ಕಚೇರಿಗೆ ಬೈಕ್ ನಲ್ಲಿ ಬಂದಿದ್ದ ಆರೋಪಿ ಮೊಹ್ಮದ್ ಏಕಾಎಕಿ ದಾಳಿ ನಡೆಸಿದ್ದಾರೆ. ಮೂರು ವಾಹನದ ಗ್ಲಾಸ್ ಸಂಪೂರ್ಣ ಜಖಂವಾಗಿದೆ. ಸೆಕ್ಯೂರಿಟಿ ಸಿಬ್ಬಂದಿಗಳಿಂದ ಉಪನಗರ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಸ್ಥಳಕ್ಕೆ ಬಂದ ಉಪನಗರ ಠಾಣೆಯ ಪೋಲಿಸರಿಂದ ಆರೋಪಿ ಬಂಧನ ಮಾಡಲಾಗಿದೆ. ಆರೋಪಿಯನ್ನು ಉಪನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ.

bigtvnews | Hubli Dharwad News | Kannada News | Karnataka News Hubli News | News In Hubli | Local news

