ಬೆಂಗಳೂರು: ಬಿಜೆಪಿಗೆ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗುತ್ತಿದೆ. ಬಿಜೆಪಿಗೆ ಸೇರಲು ಒಪ್ಪದಿದ್ದಾಗ ನನ್ನ ವಿರುದ್ಧ ಸಂಚು ರೂಪಿಸಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಟ್ವೀಟ್ ಮೂಲಕ ಈ ಬಗ್ಗೆ ಅವರು ಆರೋಪಿಸಿದ್ದು, ಸರ್ಕಾರಿ ಸಂಸ್ಥೆಗಳಿಂದ ನನ್ನ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ನನ್ನನ್ನು ಹೆದರಿಸುವುದು ಅಷ್ಟು ಸುಲಭವಲ್ಲ. ಬಿಜೆಪಿಯ 40 ಪರ್ಸೆಂಟ್ ಕಮಿಷನ್ ಸರ್ಕಾರದಿಂದ ಜನ ಬೇಸತ್ತಿದ್ದಾರೆ. ಈ ರಾಜಕೀಯ ಸೇಡಿಗೆ ಸರಿಯಾದ ಉತ್ತರ ಸಿಗಲಿದೆ ಎಂದು ಟ್ವಿಟ್ಟರ್ ನಲ್ಲಿ ಬಿಜೆಪಿ ವಿರುದ್ಧ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

