Breaking News

ಶಿಕ್ಷಕರ ಸಮಸ್ಯೆಗೆ ಸ್ಪಂದಿಸದ ಹೊರಟ್ಟಿ ಬಿಜೆಪಿಗೆ ಆಗಮನ : ಮೋಹನ ಲಿಂಬಿಕಾಯಿ

ಹುಬ್ಬಳ್ಳಿ: ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಳೆದ ಏಳು ಬಾರಿ ಗೆದ್ದರೂ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ. ಹೀಗಾಗಿಯೇ ಅವರು ಬಿಜೆಪಿಗೆ ಬಂದಿದ್ದಾರೆ. ಇದನ್ನು ಈ ಹಿಂದೆ ನೂರು ಬಾರಿ ಹೇಳಿದ್ದೇನೆ. ಈಗಲೂ ಹೇಳುತ್ತೇನೆ. ನನ್ನ ಹೇಳಿಕೆಗೆ ನಾನು ಈಗಲೂ ಬದ್ಧನಾಗಿರುತ್ತೇನೆ ಎಂದು ವಿಧಾನಪರಿಷತ್ತು ಮಾಜಿ ಸದಸ್ಯ ಹಾಗೂ ಬಿಜೆಪಿ ಟಿಕೆಟ್ ವಂಚಿತರಾಗಿರುವ ಮೋಹನ ಲಿಂಬಿಕಾಯಿ ಅವರು ಮಾಧ್ಯಮಗಳ ಮುಂದೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಬಸವರಾಜ ಹೊರಟ್ಟಿ ಅವರನ್ನು ಪಕ್ಷಕ್ಕೆ ಕರೆದುಕೊಂಡು ಬಂದು ಅವರಿಗೆ ಟಿಕೆಟ್ ನೀಡಿರುವುದನ್ನು ಕೇಳಿ ಬಹಳ ಬೇಜಾರಾಯ್ತು. ಯಾವ ಉದ್ದೇಶಕ್ಕೆ ಇದನ್ನು ಮಾಡಿದರು ಎಂಬುವುದು ಇನ್ನೂ ನಿಗೂಢವಾಗಿದೆ. ಇದೊಂದು ಯಕ್ಷ ಪ್ರಶ್ನೆಯಾಗಿ ಉಳಿದಿದೆ. ನಮ್ಮದು ರಾಷ್ಟ್ರೀಯ ಪಕ್ಷ. ಪಕ್ಷಕ್ಕೆ ಯಾರೂ ಅನಿವಾರ್ಯರಲ್ಲ. ಕಾರ್ಯಕರ್ತರು ಮಾತ್ರ ಅನಿವಾರ್ಯ. ಈ ಹಿನ್ನೆಲೆಯಲ್ಲಿ ಪಕ್ಷ ತೆಗೆದುಕೊಳ್ಳವ ನಿರ್ಧಾರಕ್ಕೆ ನಾವು ಮೂಕ ಪ್ರೇಕ್ಷಕರಂತೆ ಒಪ್ಪಿಕೊಳ್ಳಬೇಕಾಗುತ್ತದೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *