Breaking News

ಬಾಡ ಕ್ರಾಸ್ ಬಳಿ ಅಪಘಾತ : ಸಾವಿನ ಸಂಖ್ಯೆ 11ಕ್ಕೆ ಏರಿಕೆ


ಧಾರವಾಡ : ತಾಲೂಕಿನ ಬಾಡ ಗ್ರಾಮದ ಬಳಿ ನಡೆದ ಕ್ರೂಸರ್ ವಾಹನ ಅಪಘಾತ ಪ್ರಕರಣದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮತ್ತೋರ್ವ ಬಾಲಕಿ ಸಾವನ್ನಪ್ಪಿದ್ದಾಳೆ . ಈ ಮೂಲಕ ಸಾವಿನ ಸಂಖ್ಯೆ 11 ಕ್ಕೇರಿದೆ ಐದು ವರ್ಷದ ಆರಾಧ್ಯ ಹುತಮಲ್ಲನ್ನವರ ಮೃತಪಟ್ಟ ಬಾಲಕಿ . ಕಳೆದ 6 ದಿನಗಳಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಈಕೆಗೆ ಚಿಕಿತ್ಸೆ ನೀಡಲಾಗುತ್ತಿತ್ತುಮೇ 20 ರಂದು ಬಾಡ ಬಳಿ ನಡೆದ ಭೀಕರ ಅಪಘಾತದಲ್ಲಿ 9 ಜನ ಸಾವನ್ನಪ್ಪಿ , ಹಲವರು ಗಂಭೀರವಾಗಿ ಗಾಯಗೊಂಡಿದ್ದರುಮದುವೆ ನಿಶ್ಚಿತಾರ್ಥ ಮುಗಿಸಿಕೊಂಡು ವಾಪಸ್ ಬರುವಾಗ ಚಾಲಕನ ಅಜಾರೂಗಕತೆಯಿಂದ ವಾಹನ ಮರಕ್ಕೆ ಡಿಕ್ಕಿ ಹೊಡೆದಿತ್ತು ಪರಿಣಾಮ , ಸ್ಥಳದಲ್ಲೇ ಏಳು ಜನ ಹಾಗೂ ಕಿಮ್ಸ್ ಆಸ್ಪತ್ರೆಯಲ್ಲಿ ಇಬ್ಬರು ಮೃತಪಟ್ಟಿದ್ದರು .

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *