ಹುಬ್ಬಳ್ಳಿ: ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷವನ್ನು ಸದೃಢ ಮಾಡಲು ಪ್ರಕೋಷ್ಠಗಳನ್ನು ಮಾಡಲಾಗಿದ್ದು. ಆದ ಕಾರಣ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಹಾಗೂ ಧಾರವಾಡ ಗ್ರಾಮಾಂತರ ಜಿಲ್ಲಾ ಪ್ರಕೋಷ್ಠಗಳ ಸಮಾವೇಶವನ್ನು ನಗರದ ಸವಾಯಿ ಗಂಧರ್ವ ಭವನದಲ್ಲಿ ಹಮ್ಮಿಕೊಂಡಿದ್ದು ಬಿಜೆಪಿ ನಾಯಕರು ಉದ್ಘಾಟನೆ ಮಾಡಿದರು.
ಈ ಸಮಾವೇಶದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವ ಶಂಕರಪಾಟೀಲ್ ಮುನೇನಕೊಪ್ಪ, ಶಾಸಕ ಅರವಿಂದ ಬೆಲ್ಲದ್, ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬಸವರಾಜ ಕುಂದಗೋಳಮಠ, ಮಹೇಶ ನಾಲವಾಡ, ಮಹಾನಗರ ಜಿಲ್ಲಾಧ್ಯಕ್ಷ ಸಂಜಯ ಕಪಟಕರ, ಬಾನು ಪ್ರಕಾಶ, ಮಹೇಶ ಟೆಂಗಿನಕಾಯಿ, ಲಿಂಗರಾಜ ಪಟೀಲ್, ರುಧ್ರಪ್ಪ ಹಾಲರವಿ ಸೇರಿದಂತೆ ಬಿಜೆಪಿ ಎಲ್ಲ ನಾಯಕರು ಭಾಗಿಯಾಗಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





