ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆಗೆ ಕ್ಷಣ ಗಣನೆ ಆರಂಭವಾಗಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯಬಾರದೆಂದು ಪಾಲಿಕೆ ಸುತ್ತಮುತ್ತ ಪೋಲಿಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಹುಬ್ಬಳ್ಳಿ-ಧಾರವಾಡ ಪಾಲಿಕೆಗೆ ಚುನಾವಣೆ ನಡೆದು ಆರು ಏಳು ತಿಂಗಳುಗಳು ಕಳೆಯುತ್ತಾ ಬಂದಿದ್ದು, ಈವರೆಗೆ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳಿಗೆ ಅಧಿಕಾರ ಸಿಕ್ಕಿದಿಲ್ಲ. ಇಂದು ಮೇಯರ್ ಉಪಮೇಯರ್ ಚುನಾವಣೆ ನಡೆಯುತ್ತಿದ್ದು, ಯಾರು ಉಪಮೇಯರ್ ಆಗಲಿದ್ದಾರೆ ಎಂಬ ಕುತೂಹಲ ಎಲ್ಲರ ಮನಸ್ಸಿನಲ್ಲಿ ಮೂಡಿಸಿದೆ. ಹೀಗಾಗಿಯೇ ಬಿಜೆಪಿ ಈಗಾಗಲೇ ಶುಕ್ರವಾರ ರಾತ್ರಿ ಸಭೆ ನಡೆಸಿ ತಮ್ಮ ಅಭ್ಯರ್ಥಿಗಳನ್ನು ಪೈನಲ್ ಮಾಡಿಕೊಂಡಿದ್ದು, ಅಧಿಕೃತವಾಗಿ ಪ್ರಕಟ ಮಾಡುವುದೊಂದೆ ಬಾಕಿ ಉಳಿದಿದೆ. ಈತ ಕಾಂಗ್ರೆಸ್ ಕೂಡಾ ತೆರದ ಮರೆಯಲ್ಲಿ ಅಧಿಕಾರ ಹಿಡಿಯಲು ಸರ್ಕಸ್ ನಡೆಸುತ್ತಿದ್ದು, ಧಾರವಾಡದ ಮರೂರ್ ಮೋರೆ ಅವರನ್ನು ಮೇಯರ್, ಉಪಮೇಯರ್ ಸ್ಥಾನಕ್ಕೆ ದೀಪಾ ನೀಲರಕಟ್ಟಿ ಅವರಿಂದ ನಾಮಪತ್ರ ಸಲ್ಲಿಕೆ ಮಾಡಿಸಿದೆ.
ಇನ್ನು ಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ಸಂಚಾರಕ್ಕೆ ಅಡೆತಡೆಯಾಗಬಾರದೆಂಬ ಉದ್ದೇಶದಿಂದ ವಾಹನ ಪಾರ್ಕಿಂಗ್ ಗೆ ನೆಹರು ಮೈದಾನದಲ್ಲಿ ವ್ಯವಸ್ಥೆ ಮಾಡಿದೆ. ಪೋಲಿಸರು ತಪಾಸಣೆ ನಡೆಸಿ ಪಾಲಿಕೆ ಆವರಣದಲ್ಲಿ ಪ್ರವೇಶಕ್ಕೆ ಅನುಮತಿ ನೀಡುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

