ಮಂಗಳೂರು: ಜಿಲ್ಲೆಯಲ್ಲಿ ಹಿಜಾಬ್ ವಿವಾದ ಮುಗಿಯುವಂತೆ ಕಾಣಿಸುತ್ತಿಲ್ಲ.
ಈಗಾಗಲೇ ಹೈಕೋರ್ಟ್ ಶಾಲಾ- ಕಾಲೇಜುಗಳಿಗೆ ಹಿಜಾಬ್ ಧರಿಸಿ ಹೋಗುವಂತಿಲ್ಲ ಎಂದು ತೀರ್ಮಾನ ನೀಡಿದೆ. ಆದರೂ ಮಂಗಳೂರಿನ ವಿವಿ ಘಟಕ ಕಾಲೇಜಿಗೆ ಮುಸ್ಲಿಂ ಸಮುದಾಯದ 12 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ. ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲೆ ಡಾ.ಅನುಸೂಯ ರೈ ತರಗತಿಗೆ ಬಾರದಂತೆ ಪ್ರವೇಶ ನಿರಾಕರಿಸಿದ್ದಾರೆ. ಬಳಿಕ ವಿದ್ಯಾರ್ಥಿನಿಯರು ಕಾಲೇಜು ಗ್ರಂಥಾಲಯದತ್ತ ತೆರಳಿದರು. ಅಲ್ಲೂ ವಿದ್ಯಾರ್ಥಿನಿಯರನ್ನು ತಡೆದು ಪ್ರಾಂಶುಪಾಲೆ ಬುದ್ಧಿ ಹೇಳಿದ್ದಾರೆ.
ಹಿಜಾಬ್ ತೆಗೆದಿಟ್ಟು ತರಗತಿಗೆ ಹೋಗಿ ಅಂತ ಕಾಲೇಜು ಪ್ರಾಂಶುಪಾಲೆ ಡಾ.ಅನುಸೂಯ ರೈ ತಿಳಿ ಹೇಳಿದರು. ಪಟ್ಟುಬಿಡದ ವಿದ್ಯಾರ್ಥಿನಿಯರು ಕಾಲೇಜು ಲೈಬ್ರರಿ ಎದುರು ನಿಂತಿದ್ದಾರೆ.
ತರಗತಿಗಳಲ್ಲಿ ಮಾತ್ರವಲ್ಲ, ಕ್ಯಾಂಪಸ್ನಲ್ಲೂ ಹಿಜಾಬ್ಗೆ ಅವಕಾಶ ಕೊಡುವುದಿಲ್ಲ ಎಂದು ಟಿವಿ9ಗೆ ಮಂಗಳೂರು ವಿವಿ ಕಾಲೇಜು ಪ್ರಾಂಶುಪಾಲರಾದ ಅನುಸೂಯ ರೈ ಸ್ಪಷ್ಟಪಡಿಸಿದ್ದಾರೆ. ನಮ್ಮಲ್ಲಿ 44 ಜನ ಮುಸ್ಲಿಂ ವಿದ್ಯಾರ್ಥಿನಿಯರಿದ್ದಾರೆ. ಕೆಲ ವಿದ್ಯಾರ್ಥಿಗಳಿಗೆ ಮಾತ್ರ ಈ ಆದೇಶದ ಬಗ್ಗೆ ಸಮಸ್ಯೆ ಇದೆ. ಅವರನ್ನು ಅವರ ಪೋಷಕರ ಮನವೊಲಿಸಲು ನಮಗೆ ಸಮಯ ಬೇಕು. ಅವರು ನ್ಯಾಯಾಲಯದ ಆದೇಶ ಆಡಳಿತ ಮಂಡಳಿಯಿಂದ ನಿಯಮವನ್ನು ಪಾಲಿಸಲೇ ಬೇಕು. ಆಡಳಿತ ಮಂಡಳಿ ಆದೇಶ ಹಿಂದಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ. ಅನೇಕ ಶಾಸಕರು ಕರೆ ಮಾಡಿದ್ದಾರೆ ನನಗೆ ಯಾರು ಒತ್ತಡ ಹಾಕಿಲ್ಲ. ಕೇವಲ ನಮ್ಮ ಆದೇಶದ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದು ಪ್ರಾಂಶುಪಾಲರಾದ ಅನುಸೂಯ ರೈ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

