Breaking News

ಟ್ರಾನ್ಸ್ ಪೋರ್ಟ್ ಮಾಲೀಕ ಆತ್ಮಹತ್ಯೆಗೆ ಶರಣು


ಬೆಂಗಳೂರು : ಟ್ರಾನ್ಸ್ ಪೋರ್ಟ್ ಮಾಲೀಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೆಸರುಘಟ್ಟ ರಸ್ತೆಯ ಹವನೂರು ಬಡಾವಣೆಯಲ್ಲಿ ನಡೆದಿದೆ.

ಟ್ರಾನ್ಸ್ ಪೋರ್ಟ್ ಮಾಲೀಕ ಪ್ರಮೋದ್ ಹೆಗಡೆ (45) ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಮೋದ್ ಹೆಗಡೆ ಮೂಡಬಿದರಿ ಮೂಲದವರಗಾಗಿದ್ದು, 16 ವರ್ಷಗಳ ಹಿಂದೆ ವೀಣಾರನ್ನು ಮದುವೆಯಾಗಿದ್ದರು.ಪತ್ನಿ ವೀಣಾ ಸಂಬಂಧಿಕರ ಮನೆಗೆ ತೆರಳಿದ್ದರು. ಈ ವೇಳೆ ಸ್ನೇಹಿತರ ಜೊತೆಗೆ ಮ್ಯಾಚ್ ನೋಡಿ ಬಳಿಕ ರಾತ್ರಿ 10.30 ರ ಸುಮಾರಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪತ್ನಿ ವೀಣಾ ಕರೆ ಮಾಡಿದಾಗ ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಶಶಿಗೌಡ ಎಂಬುವರಿಗೆ ಮಾಹಿತಿ ನೀಡಿದ್ದಾರೆ. ವೀಣಾ ಸೂಚನೆ ಮೇರೆಗೆ ಶಶಿಗೌಡ ಎಂಬುವರು ಮನೆಗೆ ಬಂದು ನೋಡಿದಾಗ ಪ್ರಮೋದ್ ಹೆಗಡೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *