ಧಾರವಾಡ: ರೈತ ಮುಖಂಡ ರಾಕೇಶ್ ಟಿಕಾಯತ್ ಅವರ ಮುಖಕ್ಕೆ ಮಸಿ ಬಳಿದ ಪ್ರಕರಣವನ್ನು ಖಂಡಿಸಿ ಧಾರವಾಡದಲ್ಲಿ ವಿವಿಧ ರೈತ ಸಂಘಟನೆಗಳ ಮುಖಂಡರು ಧಾರವಾಡದಲ್ಲಿ ಪ್ರತಿಭಟನೆ ನಡೆಸಿದರು.
ಧಾರವಾಡದ ತಹಶೀಲ್ದಾರ ಕಚೇರಿ ಎದುರು ಪ್ರತಿಭಟನೆ ನಡೆಸಿದ ಮುಖಂಡರು, ಟಿಕಾಯತ್ ಅವರ ಮುಖಕ್ಕೆ ಮಸಿ ಬಳಿದವರ ವಿರುದ್ಧ ಧಿಕ್ಕಾರ ಕೂಗಿದರು. ಕೂಡಲೇ ಅವರನ್ನು ಬಂಧಿಸಿ, ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.
ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸುವಾಗ ಟಿಕಾಯತ್ ಅವರ ಮುಖಕ್ಕೆ ನಿನ್ನೆ ಮಸಿ ಬಳೆಯಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

