ಧಾರವಾಡ: ಎನ್ ಸಿ ಸಿ ಕೆಡೆಟ್‌ಗಳಿಂದ ಧಾರವಾಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ವಿಶ್ವ ತಂಬಾಕು ರಹಿತ ದಿನ ಆಚರಣೆ ಹಾಗೂ ಜಾಗೃತಿ ಮೂಡಿಸುವ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
ಎನ್‌ಸಿಸಿ ಕೆಡೆಟ್‌ಗಳು ಸಾಮಾಜಿಕ ಜವಾಬ್ದಾರಿ ಮತ್ತು ಸಮುದಾಯ ಅಭಿವೃದ್ಧಿ ಕಾರ್ಯಕ್ರಮದ ಭಾಗವಾಗಿ ಅನೇಕ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಅದರಂತೆ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
ಕಾರ್ಯಕ್ರಮದಲ್ಲಿ ಧಾರವಾಡದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಪಿ.ಮಠದ ಭಾಗವಹಿಸಿ ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿರಿ ಹಾಗೂ ಸದಾ ಸಮಾಜವನ್ನು ಜಾಗೃತಿ ಮಾಡುತ್ತಿರಬೇಕು ಅಂದಾಗ ಸಮಾಜಕ್ಕೆ ನಾವು ಕೊಡುಗೆ ನೀಡಿದಂತಾಗುತ್ತದೆ ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿರಬೇಕು ಎಂದು ಸಲಹೆ ನೀಡಿದರು.
ಎನ್ ಸಿ ಸಿ ಅಧಿಕಾರಿ ಎಎನ್‌ಒ ಲೆಫ್ಟಿನೆಂಟ್ ವಿದ್ಯಾ ರಾಯ್ಕರ್ ಎನ್ ಸಿ ಸಿ ವಿದ್ಯಾರ್ಥಿಗಳು ಸದಾ ಸಾಮಾಜದಲ್ಲಿ ದುಶ್ಚಟಗಳಿಂದ ನಲುಗುತ್ತಿರುವ ಜನರಿಗೆ ತಿಳುವಳಿಕೆ ಹೇಳಿ ಅವರನ್ನು ದುಶ್ಚಟಗಳಿಂದ ದೂರವಿರುವಂತೆ ತಿಳಿ ಹೇಳಬೇಕು ಎನ್ ಸಿ ಸಿ ಕೆಡೆಟ್ ಗಳು ಸಮಾಜವನ್ನು ಜಾಗೃತ ಗೊಳಿಸುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು ಎಂದು ತಿಳಿಸಿದರು.
ಧಾರವಾಡ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ವಿಶ್ವ ತಂಬಾಕು ರಹಿತ ದಿನ ಆಚರಣೆಯ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

