Breaking News

ನಾಡಗೀತೆ ಅವಮಾನ ಹಿನ್ನೆಲೆ ಜೂನ್‌ 2ರಂದು ಮೈಸೂರುನಲ್ಲಿ ಪ್ರತಿಭಟನೆ


ಮೈಸೂರು: ‘ರಾಷ್ಟ್ರಕವಿ ಕುವೆಂಪು ರಚಿತ ನಾಡಗೀತೆಗೆ ಅಪಮಾನ ಮಾಡಿರುವ ಹಾಗೂ ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ಮರಾಠಿಗರು ನಡೆಸಿದ ಹಲ್ಲೆ ಪ್ರಕರಣವನ್ನು ಖಂಡಿಸಿ ಜೂನ್‌ 2ರಂದು ಬೆಳಿಗ್ಗೆ 11 ಗಂಟೆಗೆ ನಗರದ ಗಾಂಧಿ ಚೌಕದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕದ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್‌ ತಿಳಿಸಿದರು.

‘ನಾಡಗೀತೆಯನ್ನು ತಿರುಚಿ ಬರೆದಿರುವುದು ಹಾಗೂ ಮಹಾಕವಿಯನ್ನು ನಿಂದಿಸಿರುವುದು ಅಕ್ಷಮ್ಯ ಅಪರಾಧ. ಕನ್ನಡಿಗರ ಮೇಲೆ ಹಲ್ಲೆ ನಡೆಸಿರುವ ಮರಾಠಿ ಪುಂಡರನ್ನು ಗಡಿಪಾರು ಮಾಡಬೇಕು’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *