Breaking News

ಶಿಕ್ಷಣ ಸಚಿವ ನಿವಾಸಕ್ಕೆ ನುಗ್ಗಿ ದಾಂಧಲೆ : ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ


ಬೆಂಗಳೂರು: ಪ್ರಾಥಮಿಕ ಹಾಗು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರ ನಿವಾಸಕ್ಕೆ ನುಗ್ಗಿ ದಾಂಧಲೆ ನಡೆಸಿರುವ ಘಟನೆ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ, ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ತಿಪಟೂರಿನ ಮನೆಯ ಆವರಣಕ್ಕೆ ನುಗ್ಗಿ NSUI ಕಾರ್ಯಕರ್ತರು ಪ್ರತಿಭಟನೆ ಮಾಡಿ ದಾಂಧಲೆ ನಡೆಸಿರುವುದು ಖಂಡನೀಯ. ಇಂತಹ ನಡೆ ವಿದ್ಯಾರ್ಥಿಗಳಿಗೆ, ಶಿಕ್ಷಣ ಪ್ರೇಮಿಗಳಿಗೆ ಶೋಭೆ ತರುವುದಿಲ್ಲ. ಈ ಕುಕೃತ್ಯ ನಡೆಸಿರುವ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *