Breaking News

ಕೆಲ ರಾಜ್ಯಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆ

ನವದೆಹಲಿ: ಇನ್ನು ಕೆಲ ದಿನಗಳಲ್ಲಿ ನೈರುತ್ಯ ಮುಂಗಾರು ಅಪ್ಪಳಿಸಲಿದ್ದು, ಕೆಲ ರಾಜ್ಯಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ನೈಋತ್ಯ ಮಾನ್ಸೂನ್ ಕೇರಳ, ತಮಿಳುನಾಡು ಮತ್ತು ಕರ್ನಾಟಕದ ಭಾಗಗಳಲ್ಲಿ ಅಬ್ಬರಿಸಲಿದೆ. ಆದರೆ ಉತ್ತರ ಭಾರತದಲ್ಲಿ ಮೊದಲ ಮಾನ್ಸೂನ್ ಮಳೆ ಸುರಿಯುವುದು ಜೂನ್ ಅಂತ್ಯದ ವೇಳೆಗೆ ಎಂದು ಹೇಳಲಾಗುತ್ತಿದೆ.

“ಮಧ್ಯ ಅರೇಬಿಯನ್ ಸಮುದ್ರದ ಕೆಲವು ಭಾಗಗಳು, ಕರ್ನಾಟಕದ ಕೆಲವು ಭಾಗಗಳು, ಕೊಂಕಣ ಮತ್ತು ಗೋವಾದ ಕೆಲವು ಭಾಗಗಳು, ತಮಿಳುನಾಡಿನ ಕೆಲವು ಭಾಗಗಳು, ನೈಋತ್ಯ ಬಂಗಾಳ ಕೊಲ್ಲಿಯ ಉಳಿದ ಭಾಗಗಳು, ಇನ್ನೂ ಕೆಲವು ಭಾಗಗಳಲ್ಲಿ ನೈಋತ್ಯ ಮಾನ್ಸೂನ್ ಮತ್ತಷ್ಟು ಅಬ್ಬರಿಸಲಿದೆ ಎಂದು ಮುನ್ಸೂಚನೆ ನೀಡಿದೆ. ಮುಂದಿನ 2 ದಿನಗಳಲ್ಲಿ ಪಶ್ಚಿಮ ಮಧ್ಯ ಬಂಗಾಳ ಕೊಲ್ಲಿ, ಈಶಾನ್ಯ ಬಂಗಾಳ ಕೊಲ್ಲಿ, ಈಶಾನ್ಯ ರಾಜ್ಯಗಳು, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ರಾಜ್ಯಗಳಲ್ಲೂ ಗುಡುಗು ಸಹಿತ ಮಳೆಯಾಗಲಿದೆ” ಎಂದು ಐಎಂಡಿ ಬಿಡುಗಡೆಗೊಳಿಸಿದ ವರದಿಯಲ್ಲಿ ತಿಳಿಸಿದೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *